ಕೂಡಿಗೆ, ಸೆ. ೧೯: ಕೂಡುಮಂಗಳೂರು ಬಿಜೆಪಿ ಶಕ್ತಿ ಕೇಂದ್ರದಿAದ ವತಿಯಿಂದ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಕೂಡಿಗೆಯಲ್ಲಿರುವ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿರುವ ವಯೋವೃದ್ಧರಿಗೆ ಹಣ್ಣು ಹಂಪಲು, ಮತ್ತು ಸಿಹಿ ವಿತರಣೆ ಮಾಡಲಾಯಿತು.

ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಮಂಜುನಾಥ ಗುರುಲಿಂಗಪ್ಪ ಪ್ರವೀಣ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಗಣಿ ಪ್ರಸಾದ್ ರಾಜ್ಯ ಪರಿಶಿಷ್ಟ ಪಂಗಡದ ಕಾರ್ಯದರ್ಶಿ ಕೆ.ಆರ್. ಮಂಜುಳ, ಜಿಲ್ಲಾ ಪರಿಶಿಷ್ಟ ಪಂಗಡ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಮಂಡಲ ಉಪಾಧ್ಯಕ್ಷ ಕೆ, ವರದ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಸದಸ್ಯರುಗಳಾದ ಕೆ.ಕೆ. ಭೋಗಪ್ಪ, ಚೈತ್ರ ಮಂಜುನಾಥ, ಆಶಾ ವೆಂಕಟೇಶ ಹರೀಶ್, ಮಾಜಿ ಅಧ್ಯಕ್ಷ ಮನು ನಂಜುAಡ, ಮಾಜಿ ಸದಸೆÀ್ಯ ಸಾವಿತ್ರಿ ರಾಜನ್, ಜ್ಯೋತಿ ಪ್ರಮೀಳಾ, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಮ್ಮ ಸೇರಿದಂತೆ ಮತ್ತಿತರರು ಇದ್ದರು.