ಮಡಿಕೇರಿ, ಸೆ. ೨೧: ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ತಾ. ೨೩ ರಂದು (ನಾಳೆ) ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ ೧೦.೩೦ ಕ್ಕೆ ನಡೆಯಲಿರುವ ಕಾರ್ಯ ಕ್ರಮದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನದ ಸೇರಿದಂತೆ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚೆ ಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.