*ವೀರಾಜಪೇಟೆ, ಸೆ. ೨೧: ವೀರಾಜಪೇಟೆ ಪಟ್ಟಣವು ಮೂರು ವರ್ಷಗಳಿಂದ ಅತಿಯಾದ ಮಳೆಯಿಂದಾಗಿ ತೀವ್ರ ಹಾನಿಗೀಡಾಗಿದ್ದು, ನಗರದಲ್ಲಿ ವಿವಿಧ ರೀತಿಯ ಕಾಮಗಾರಿಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪಟ್ಟಣ ಪಂಚಾಯಿತಿಗೆ ವಿಶೇಷ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಪಂಚಾಯಿತಿಯ ಸರ್ವ ಸದಸ್ಯರ ನಿಯೋಗ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿತು.
ವೀರಾಜಪೇಟೆ ವಿಧಾನಸಭಾ ಶಾಸಕ ಕೆ.ಜಿ. ಬೋಪಯ್ಯ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಸರ್ವ ಸದಸ್ಯರ ನಿಯೋಗಕ್ಕೆ ಭರವಸೆ ಈಡೇರಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ಸುನಿತಾ ಹಾಗೂ ಸರ್ವ ಸದಸ್ಯರು ಹಾಜರಿದ್ದರು.