ಮಡಿಕೇರಿ, ಸೆ. ೨೧: ಜಿಲ್ಲೆಯಲ್ಲಿ ಮಂಗಳವಾರ ೧೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೬, ಸೋಮವಾರಪೇಟೆ ತಾಲೂಕಿನಲ್ಲಿ ೭, ವೀರಾಜಪೇಟೆ ತಾಲೂಕಿನಲ್ಲಿ ೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೪,೬೧೩ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೩ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೩೬೦೪ ಮಂದಿ ಗುಣಮುಖರಾಗಿದ್ದಾರೆ. ೫೮೫ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨ ಸಾವು ಉಂಟಾಗಿದ್ದು, ಇದುವರೆಗೆ ಒಟ್ಟು ೪೨೪ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೫೧ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೦.೪೪ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.