ಮಡಿಕೇರಿ, ಸೆ. ೨೧: ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. ೨೨ ರಂದು (ಇಂದು) ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್, ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಮಧ್ಯಾಹ್ನ ೨.೩೦ ರಿಂದ ೩.೩೦ ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.

ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ಮತ್ತು ಸೋಮವಾರಪೇಟೆ ಉಪವಿಭಾಗ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ಸೆಸ್ಕ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.