ನಾಪೋಕ್ಲು, ಸೆ. ೨೦: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ನಾಪೋಕ್ಲು ಕೊಡವ ಸಮಾಜದ ಸಂಯುಕ್ತಾಶ್ರಯದಲ್ಲಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ ೧೫೩ನೇ ಜನ್ಮ ದಿನಾಚರಣೆಯು ಇಂದು ಅಂದರೆ, ತಾ. ೨೧ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ನಾಪೋಕ್ಲು ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಭಾಗವಹಿಸಲಿದ್ದಾರೆ. ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ವಿಚಾರ ಮಂಡನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಚೆಕ್ಕೆರ ಪಂಚಮ್ ತ್ಯಾಗರಾಜ್ ಮತ್ತು ಸಂಗಡಿಗರಿAದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರು ರಚಿಸಿದ ಗೀತೆಗಳ ಗಾಯನ ನಡೆಯಲಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ