ಮಡಿಕೇರಿ, ಸೆ.೨೦: ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆ ಸಂಬAಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದಸರಾ ಆಚರಣೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು.

ಕೋವಿಡ್ ಪ್ರಕರಣಗಳು ಹೆಚ್ಚಿರುವುದರಿಂದ ಕಳೆದ ಬಾರಿಯಂತೆ ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಆಚರಣೆಗೆ ಜಿಲ್ಲಾಡಳಿತ ಜತೆ ಎಲ್ಲರೂ ಸಹಕರಿಸುವಂತೆ ಕೋರಿದರು.

ಕೋವಿಡ್ ಹಿನ್ನೆಲೆ ಸರ್ಕಾರದ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕಳೆದ ಬಾರಿ ಯಾವ ರೀತಿ ದಸರಾ ಆಚರÀಣೆಗೆ ಕ್ರಮ ವಹಿಸಲಾಗಿತ್ತು ಅದನ್ನು ಮುಂದುವರಿಸಬೇಕು. ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಪಾಲಿಸುವಂತೆ ಹೇಳಿದರು.

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂಬAಧ ಮತ್ತೊಂದು ಬಾರಿ ಸಭೆ ಸೇರಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಮಡಿಕೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ ಕೋವಿಡ್ ಪೂರ್ವದಲ್ಲಿ ಮಡಿಕೇರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು, ಆದರೆ ಕೋವಿಡ್ ನಂತರ ಕಳೆದ ಬಾರಿ ಸಾಂಪ್ರದಾಯಿಕ ವಾಗಿ ಆಚರಿಸಲಾಯಿತು. ಶಕ್ತಿ ದೇವತೆಗಳ ಕರಗ ಉತ್ಸವವು ಅಕ್ಟೋಬರ್ ೭ ರಂದು ಪಂಪಿನಕೆರೆಯಿAದ ಆರಂಭಗೊಳ್ಳಲಿದೆ, ಪೂಜಾ ವಿಧಿವಿಧಾನಗಳು ಎಂದಿನAತೆ ನಡೆಯಲಿವೆ ಎಂದು ಹೇಳಿದರು.

ಮಡಿಕೇರಿ ದಸರಾಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲಾಗುವುದು ಎಂದು ರಾಬಿನ್ ದೇವಯ್ಯ ತಿಳಿಸಿದರು. ಕಳೆದ ಬಾರಿ ಕರಗ ಉತ್ಸವ ಚಾಲನಾ ಸಂದರ್ಭದಲ್ಲಿ ೧೦೦ ಜನ ಭಾಗವಹಿಸಿದ್ದರು ಎಂದು ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ ಅವರು ಮಾಹಿತಿ ನೀಡಿದರು. ದಶಮಂಟಪ

(ಮೊದಲ ಪುಟದಿಂದ) ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ ಅವರು ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಯಿತು. ವ್ಯಾಪಾರ ವಹಿವಾಟಿಗೆ ಉತ್ತೇಜನ ನೀಡುವಲ್ಲಿ ಈ ಬಾರಿ ಅಗತ್ಯ ಸಹಕಾರಕ್ಕೆ ಕೋರಿದರು. ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಮಾತನಾಡಿ ಕಳೆದ ವರ್ಷದಂತೆ ಈ ಬಾರಿ ದಸರಾ ಆಚರಿಸಿದರೆ ಆಕರ್ಷಣಿಯವಾಗಿರುವುದಿಲ್ಲ, ಮಡಿಕೇರಿ ನಗರದಲ್ಲಿ ಬೆಳಕಿನ ವ್ಯವಸ್ಥೆ ಹಾಗೂ ಅಲಂಕಾರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಪೌರಾಯುಕ್ತ ಎಸ್.ವಿ.ರಾಮದಾಸ್ ಅವರು ಮಡಿಕೇರಿ ದಸರಾ ಆಚರಣೆ ಹಾಗೂ ಬೈಲಾ ಬಗ್ಗೆ ಮಾಹಿತಿ ನೀಡಿದರು.

ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿಯ ಜಪ್ಪು ಸುಬ್ಬಯ್ಯ ಅವರು ಮಾತನಾಡಿ ಗೋಣಿಕೊಪ್ಪದಲ್ಲಿ ೧೦ ದಿನಗಳ ಕಾಲ ಚಾಮುಂಡೇಶ್ವರಿ ಪೂಜೆ ಮಾಡಿ ದಸರಾ ಆಚರಿಸಲಾಗುತ್ತದೆ, ಸರ್ಕಾರದ ನಿಯಮದಂತೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನ ಅವರು ಕಳೆದ ಬಾರಿಯ ಸಭೆಯ ನಡವಳಿಯ ಬಗ್ಗೆ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜು, ಪ್ರಮುಖರಾದ ಸೂರ್ತಲೆ ಸೋಮಣ್ಣ, ಗೋಣಿಕೊಪ್ಪ ದಸರಾ ಸಮಿತಿಯ ಅಧ್ಯಕ್ಷÀ ರಾಮಕೃಷ್ಣ, ಪಿಡಿಒ ತಿಮ್ಮಯ್ಯ ಇತರರು ಇದ್ದರು.