ಸೋಮವಾರಪೇಟೆ, ಸೆ. ೨೧: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಪ್ರಯುಕ್ತ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಇದರೊಂದಿಗೆ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸಮೀಪದ ಬೇಳೂರು ವೃದ್ದಾಶ್ರಮದಲ್ಲಿರುವ ವೃದ್ಧರಿಗೆ ಹಣ್ಣು ಹಂಪಲು ನೀಡಲಾಯಿತು.

ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ನಗರಾಧ್ಯಕ್ಷ ಸೋಮೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಕಾರ್ಯದರ್ಶಿ ತಂಗಮ್ಮ, ರಾಜ್ಯ ಸಮಿತಿಯ ವಿಜಯಲಕ್ಷಿö್ಮÃ ಸುರೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.