ಬೆAಗಳೂರು, ಸೆ. ೨೨: ಕಾಫಿ ಬೆಳೆಗಾರರು ರಾಷ್ಟಿçÃಕೃತ ಬ್ಯಾಂಕ್ಗಳಲ್ಲಿ ಮಾಡಿರುವ ಸಾಲದ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ರಾಷ್ಟಿçÃಕೃತ ಬ್ಯಾಂಕುಗಳಿಗೆ ಸೂಚಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಮತ್ತು ಚಿಕ್ಕಮಗಳೂರಿನ ಶಾಸಕರೂ ಆದ ಸಿ.ಟಿ. ರವಿ ತಿಳಿಸಿದ್ದಾರೆ.
ಆರ್ಥಿಕ ಹೊಡೆತದಿಂದ ನಲುಗಿರುವ ಕಾಫಿ ಉದ್ಯಮ ಮತ್ತು ಕಾಫಿ ಬೆಳೆಗಾರರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಮರುಸಾಲ ನೀಡುವಂತೆ ಹಾಲಿ ಇರುವ ಬಡ್ಡಿದರದಲ್ಲಿ ಕಾಫಿ ಬೆಳೆ ಹಾಗೂ ಇತರ ಕೃಷಿ ಕ್ಷೇತ್ರದ ಸಾಲಗಳನ್ನು ಬೆಳೆಗಾರರು ಮರುಪಾವತಿ ಮಾಡಲು ಸಾಧ್ಯವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಕಾಫಿ ಮತ್ತು ಇತರ ಕೃಷಿಯ ಸಮಗ್ರ ಸಾಲಗಳ ಮೇಲಿನ ಬಡ್ಡಿಯನ್ನು ಶೇ.೩ರಷ್ಟು ನಿಗದಿಪಡಿಸಬೇಕು ಎಂದು ತಮ್ಮ ನೇತೃತ್ವದ ನಿಯೋಗವು ಒತ್ತಾಯಿಸಿದ್ದು, ಅದಕ್ಕೆ ಸಚಿವರು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ ಎಂದೂ ಸಿ.ಟಿ.ರವಿ ತಿಳಿಸಿದ್ದಾರೆ.
ಕಾಫಿ ಕೃಷಿಗೆ ಸಂಬAಧಿಸಿದ ಸಾಲವನ್ನು ಸರ್ಫೇಸಿ ಕಾಯ್ದೆ (ಸೆಕ್ಯುರಿಟೈಸೇಷನ್ ಅಂಡ್ ರೀಕನ್ಟçಕ್ಷನ್ ಆಫ್ ಫೈನಾನ್ಶಿಯಲ್ ಅಸೆಟ್ ಅಂಡ್ ಎನ್ಫೋರ್ಸ್ಮೆಂಟ್ ಆಫ್ ಸೆಕ್ಯುರಿಟಿ ಇಂಟರೆಸ್ಟ್) ಯಿಂದ ಹೊರಗಿಡುವಂತೆ ಒತ್ತಾಯಿಸಿದ್ದಕ್ಕೆ ಸಕಾರಾತ್ಮಕವಾಗಿ ಒಪ್ಪಿದ್ದಾರೆ. ಇದೀಗ ಕಾಫಿ ಉದ್ಯಮಕ್ಕೆ ಕಂಟಕವಾಗಿರುವ ಸರ್ಫೇಸಿ ಕಾಯ್ದೆಯಿಂದ ಕಾಫಿಗೆ ಸಂಬAಧಿಸಿದ
(ಮೊದಲ ಪುಟದಿಂದ) ಎಲ್ಲಾ ರೀತಿಯ ಸಾಲವನ್ನು ಹೊರಗಿಡಬೇಕು ವಿತ್ತ ಸಚಿವರನ್ನು ಒತ್ತಾಯಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಕಾಫಿ ಬೆಳೆಗಾರರು ಪ್ರಾಕೃತಿಕ ವಿಕೋಪಕ್ಕೆ ಒಳಗಾಗಿದ್ದಾರೆ. ಹೆಚ್ಚು, ಗುಡ್ಡ ಜರುಗುವಿಕೆ, ತೋಟಗಾರಿಕೆ ಸಲಕರಣೆಗಳು, ಗಿಡಗಳು ಹಾಳಾಗುತ್ತಿವೆ. ಜೊತೆಗೆ ಸಾಂಕ್ರಾಮಿಕ ರೋಗವಾದ ಕೋವಿಡ್ ನಿಂದ ನಲುಗಿ ಹೋಗಿದ್ದಾರೆ. ಎಲ್ಲವನ್ನು ಪರಿಗಣಿಸಿ ಕಾಫಿ ಬೆಳೆಗಾರರ ನೆರವಿಗೆ ಬನ್ನಿ ಎಂದು ಕೋರಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.
ರಾಜ್ಯದ ಕೊಡಗು ಹಾಗೂ ಇತರ ಕೆಲವು ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ಕೋವಿಡ್-೧೯ ಬಂದ ನಂತರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಸುಂದರ ಮಲೆನಾಡಾಗಿರುವ ಕಾಫಿ ಸೀಮೆಯಲ್ಲಿ ಅತಿಯಾದ ಮಳೆ, ಹವಾಮಾನ ವೈಪರೀತ್ಯದಿಂದ ದಿನದಿಂದ ದಿನಕ್ಕೆ ಕಾಫಿ ತೋಟಗಳು ಮಾಯವಾಗುತ್ತಿವೆ. ಇದಕ್ಕೆ ಕಾರಣ ವಿವರಿಸಿದ್ದಾಗಿ ಅವರು ತಿಳಿಸಿದ್ದಾರೆ.
ರಾಜ್ಯದ ಕೊಡಗು ಹಾಗೂ ಇತರ ಜಿಲ್ಲೆಗಳ ಕಾಫಿ ಬೆಳೆಯುವ ರೈತರು ಮತ್ತು ಕಾಫಿ ಉದ್ಯಮಿಗಳು ಸಾಂಕ್ರಾಮಿಕ ರೋಗದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಕಾಫಿ ಬೆಳೆಗಾರರು ರಾಷ್ಟಿçÃಕೃತ ಬ್ಯಾಂಕುಗಳಿAದ ಪಡೆದ ಸಾಲದ ಮೇಲೆ ವಿಧಿಸುತ್ತಿರುವ ಬಡ್ಡಿಯಿಂದ ಆರ್ಥಿಕ ಹೊರೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವ ಮೂಲಕ ಸಮಸ್ಯೆಗೆ ಇತಿಶ್ರೀ ಹಾಡಬೇಕು ಎಂದು ಕೇಂದ್ರದ ಆರ್ಥಿಕ ಸಚಿವೆÀ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿ ಬಂದಿದ್ದೇವೆ ಎಂದು ತಿಳಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಹೊರಡಿಸಿರುವ, ಕೃಷಿ ಸಾಲದ ಮರು ಹೊಂದಾಣಿಕೆಗೆ ಸ್ಪಷ್ಟ ಸೂಚನೆಯಿದ್ದರೂ ಕೂಡ ಹಲವು ರಾಷ್ಟಿçÃಕೃತ ಬ್ಯಾಂಕ್ ಹಾಗೂ ಇತರ ವಾಣಿಜ್ಯ ಬ್ಯಾಂಕು ಶಾಖೆಗಳು ಬೆಳೆಗಾರರ ಸಾಲದ ಖಾತೆಗಳನ್ನು ನವೀಕರಿಸಲು ಹಿಂಜರಿಯುತ್ತಿವೆ. ಈ ಬಗ್ಗೆಯೂ ಬ್ಯಾಂಕುಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಲಾಗಿದೆ ಎಂದು ಶ್ರೀ ಸಿ.ಟಿ.ರವಿ ಅವರು ತಿಳಿಸಿದ್ದಾರೆ.
ನಿಯೋಗದಲ್ಲಿ ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಬೋಜೇಗೌಡ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ. ಹೆಚ್.ಟಿ.ಮೋಹನ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್, ಉಪಾಸಿ ಕಾಫಿ ಸೆಕ್ಟರ್ ಚರ್ಮನ್ ಜೆಫ್ರಿರೆಬೆಲ್ಲೋ, ಕರ್ನಾಟಕ ಪ್ಲಾಂರ್ಸ್ ಅಸೋಸಿಯೇಷನ್ ಚರ್ಮೆನ್ ಅಪ್ಪಾದೊರೈ, ಕೊಡಗು ಪ್ಲಾಂರ್ಸ್ ಅಸೋಸಿಯೇಷನ್ ಚರ್ಮೆನ್ ರಾಮ್ನಾಗಪ್ಪ, ಸದಸ್ಯ ಪ್ರದೀಪ್ ಪೂವಯ್ಯ ಇದ್ದರು.