ಕೂಡಿಗೆ, ಸೆ. ೨೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡು ಮಂಗಳೂರು ಸಮುದಾಯ ಭವನದ ಸಭಾಂಗಣದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಬೀಟ್ ಪೊಲೀಸ್ ಸಭೆಯು ಕುಶಾಲನಗರ ವೃತ್ತ ನಿರೀಕ್ಷಕ ಮಹೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವೃತ್ತ ನಿರೀಕ್ಷಕ ಮಹೇಶ್ ಅವರು ಪೊಲೀಸ್ ಮತ್ತು ಸಾರ್ವಜನಿಕರ ಸಂಬAಧ, ಕಾನೂನಿನ ಅರಿವು ಸೇರಿದಂತೆ ಸಾರ್ವಜನಿಕರು ತಿಳಿದುಕೊಳ್ಳ ಬೇಕಾಗಿರುವ ನೂತನ ಕಾನೂನಿನ ವಿಷಯಗಳನ್ನು ಸವಿಸ್ತಾರವಾಗಿ ಮಾಹಿತಿ ನೀಡಿದರು. ೧೧೨ ರ ವಾಹನದ ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಂಡು ಅದರ ಪ್ರಯೋಜನ ಪಡೆದುಕೊಳ್ಳಲು ತಿಳಿಸಿದರು.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್, ಸಹಾಯಕ ಠಾಣಾಧಿಕಾರಿ ರವಿ ಸೇರಿದಂತೆ ಕೂಡುಮಂಗಳೂರು ಗ್ರಾಮಸ್ಥರು ಭಾಗವಹಿಸಿದ್ದರು.