ಮಡಿಕೇರಿ, ಸೆ. ೨೧: ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿಯಲ್ಲಿ ರಾಜ್ಯದಲ್ಲೂ ಕಾನೂನು ತರಬೇಕಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು.
ಎಲ್ಲ ಕಡೆ ಮತಾಂತರ ಜಾಸ್ತಿ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದರೆ ಕಾಯ್ದೆ ಜಾರಿಗೊಳಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಗೂಳಿಹಟ್ಟಿ ಶೇಖರ್ ಚಿತ್ರದುರ್ಗದಲ್ಲಿ ೨೦ ಸಾವಿರಕ್ಕೂ ಹೆಚ್ಚು ಜನ ಮತಾಂತರವಾಗಿದ್ದಾರೆ. ನನ್ನ ಹೆತ್ತ ತಾಯಿಯನ್ನೂ ಮತಾಂತರ ಮಾಡಿದ್ದಾರೆ ಎಂದು ಹೇಳಿದರು. ಕೆಲವು ಚರ್ಚ್ಗಳಲ್ಲಿ ಬ್ರೆöÊನ್ವಾಶ್ ಮಾಡುತ್ತಿದ್ದಾರೆ, ತಾಯಿಗೂ ಬ್ರೆöÊನ್ವಾಶ್ ಮಾಡಿದ್ದಾರೆ ಎಂದು ದೂರಿದರು.
ಪರಿಶಿಷ್ಟರು, ಹಿಂದುಳಿದ ವರ್ಗದವರನ್ನು ಹೆಚ್ಚು ಮತಾಂತರ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಪಿಡುಗು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು. ಇದಕ್ಕೆ ದನಿಗೂಡಿಸಿದ ಶಾಸಕ ಬೋಪಯ್ಯ ಪರಿಶಿಷ್ಟ ವರ್ಗದವರು ವಾಸವಿರುವ ಕಾಲೋನಿಗಳಲ್ಲಿ ಮೆಷನರಿಯವರು ವ್ಯವಸ್ಥಿತ ರೀತಿಯಲ್ಲಿ ಮತಾಂತರ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕಠಿಣ ಕಾನೂನು ರೂಪಿಸಬೇಕೆಂದರು.
ಸದಸ್ಯರ ಮಾತುಗಳನ್ನು ಕೇಳಿದ ಗೃಹಸಚಿವ ಆರಗ ಜ್ಞಾನೇಂದ್ರ, ಆಮಿಷವೊಡ್ಡಿ ಮತಾಂತರ ಮಾಡುವುದು ಅಪರಾಧ. ಶಾಂತಿ ಭಂಗವುAಟು ಮಾಡುವ ಆತಂಕವೂ ಇದೆ. ಮುಂದೆ ಏನು ಮಾಡಬೇಕು ಎಂಬ ಕುರಿತು ರಾಜ್ಯ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಹೇಳಿದರು.