ಮುಳ್ಳೂರು, ಸೆ. ೨೨: ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ವಿದ್ಯಾಚೇತನ ಯೋಜನೆ ಯಡಿಯಲ್ಲಿ ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆ ಯಲ್ಲಿ ಸ್ನೇಹಸೇತು ಕಾರ್ಯಕ್ರಮದಲ್ಲಿ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿನಿಯರಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಲು ಮಾದರಿ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಮಾರ್ಗಸೂಚಿ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು.

ಶಾಲೆಯಲ್ಲಿ ನಡೆದ ಸ್ನೇಹ ಸೇತು ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ವಲಯ ಸೇನಾನಿ ಟಿ.ಆರ್. ಪುರುಷೋತ್ತಮ್ ಪಾಲ್ಗೊಂಡು ಮಾತನಾಡಿ, ರೋಟರಿ ಸಂಸ್ಥೆ ಕೇವಲ ಸಮಾಜ ಸೇವೆಗೆ ಮೀಸಲಾಗದೆ ಶಿಕ್ಷಣ, ಆರೋಗ್ಯ, ಅರಣ್ಯ, ಪರಿಸರ ಬಗ್ಗೆ ಕಾಳಜಿ ಇದ್ದು ಈ ನಿಟ್ಟಿನಲ್ಲಿ ಸಂಸ್ಥೆಯು ಸೇವೆ ಜಾಗೃತಿಯ ಮೂಲಕ ಪ್ರೋತ್ಸಾಹಿಸುತ್ತಿರುವ ಜೊತೆಯಲ್ಲಿ ಕೋವಿಡ್ ಪಿಡುಗು ಬಗ್ಗೆ ಜನ ಜಾಗೃತಿ, ಜನರಿಗೆ ಉಚಿತ ಮಾಸ್ಕ್ ವಿತರಣೆ ಮುಂತಾದ ಕಾರ್ಯವನ್ನು ಮಾಡುತ್ತಿದೆ ಎಂದರು. ರೋಟರಿ ಸಂಸ್ಥೆಯ ವಿದ್ಯಾಚೇತನ ಯೋಜನಡಿಯಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸ್ನೇಹಸೇತು ಕಾರ್ಯಕ್ರಮ ಹಮ್ಮಿಕೊಂಡು ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾದರಿ ಪ್ರಶ್ನೆಗಳನ್ನು ಒಳಗೊಂಡ ಮಾರ್ಗಸೂಚಿ ಪುಸ್ತಕಗಳನ್ನು ವಿತರಿಸುತ್ತಿದ್ದು, ವಿದ್ಯಾರ್ಥಿಗಳು ಮಾರ್ಗಸೂಚಿ ಪುಸ್ತಕಗಳನ್ನು ಓದಿಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವAತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ವಲಯ ಕಾರ್ಯದರ್ಶಿ ಹೆಚ್.ಎಸ್. ವಸಂತ್, ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ಪಿ. ಮೋಹನ್, ಕಾರ್ಯದರ್ಶಿ ಎಂ.ಎಸ್. ವಸಂತ್, ನಿಕಟಪೂರ್ವ ಕಾರ್ಯದರ್ಶಿ ಎ.ಡಿ. ಮೋಹನ್ ಕುಮಾರ್, ರೋಟರಿ ಸದಸ್ಯರಾದ ಕೆ.ಪಿ. ಜಯಕುಮಾರ್, ಶ್ವೇತ ವಸಂತ್, ಕಾಲೇಜು ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್, ಶಿಕ್ಷಕಿಯರಾದ ಸುಚಿತ್ರ, ಸವಿತಾ ಹಾಜರಿದ್ದರು.