ಮಡಿಕೇರಿ, ಸೆ.೨೨ : ಕೊಡಗು ಜಿಲ್ಲಾ ಸರ್ವೋದಯ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿಯ ೧೫೩ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಅ.೨ ರಂದು ೮ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ದೇಶ ಭಕ್ತಿ ಗೀತೆ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ.

ನಗರದ ಗಾಂಧಿ ಮೈದಾನದಲ್ಲಿ ಬೆಳಗ್ಗೆ ೯ ಗಂಟೆಗೆ ಗಾಂಧಿ ಪ್ರತಿಮೆಗೆ ಗೌರವಾರ್ಪಣೆ ಸಲ್ಲಿಸಿದ ನಂತರ ಸ್ಪರ್ಧಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ಆಸಕ್ತರು ತಾ. ೨೫ರ ಒಳಗಾಗಿ ಸಮಿತಿಯ ಸದಸ್ಯರುಗಳಾದ ಅಂಬೆಕಲ್ ನವೀನ್ (೯೪೪೮೦೦೫೬೪೨), ಎಂ.ಎA.ಲಿಯಾಖತ್ ಆಲಿ (೯೪೪೮೪೨೨೫೦೫) ಇವರುಗಳನ್ನು ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವAತೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ತಿಳಿಸಿದ್ದಾರೆ.