ಬೆಂಗಳೂರು, ಸೆ. ೨೨: ರಾಜ್ಯದಲ್ಲಿ ತಾ. ೨೪ ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿAದ ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ತಾ. ೨೪ ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.