ಸೋಮವಾರಪೇಟೆ, ಸೆ. ೨೨: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಸ್ಥಳೀಯ ಸಫಾಲಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ತಾಲೂಕು ಅಧ್ಯಕ್ಷ ಹೆಚ್.ಆರ್. ಹರೀಶ್ ಕುಮಾರ್ ವಹಿಸಿದ್ದರು. ತಾಲೂಕು ಪತ್ರಕರ್ತರ ೨೯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಪ.ಪಂ. ಪ್ರಭಾರ ಅಧ್ಯಕ್ಷ ಬಿ.ಸಂಜೀವ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತ ರೈ, ರಾಜ್ಯ ಪತ್ರಕರ್ತರ ಸಂಘದ ನಿರ್ದೇಶಕ ರಮೇಶ್ ಕುಟ್ಟಪ್ಪ, ರಾಷ್ಟಿçÃಯ ಮಂಡಳಿ ಸದಸ್ಯ ಎಸ್.ಎ. ಮುರಳೀಧರ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಸ್. ಮಹೇಶ್, ಕುಶಾಲನಗರ ಪತ್ರಕರ್ತರ ಸಂಘದ ಅಧ್ಯಕ್ಷ ರಘು ಹೆಬ್ಬಾಲೆ ಅವರುಗಳು ಉಪಸ್ಥಿತರಿದ್ದರು.