ಮಡಿಕೇರಿ, ಸೆ. ೨೩: ಪ್ರಧಾನಿ ನರೇಂದ್ರ ಮೋದಿ ಅವರ ೭೧ನೇ ಜನ್ಮ ದಿನದ ಅಂಗವಾಗಿ ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ನಗರದ ರೋಟರಿ ಭವನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಮತ್ತು ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸುಮಾರು ೬೦ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಮಾತನಾಡಿ, ರಕ್ತದಾನ ಶ್ರೇಷ್ಠ ದಾನವಾಗಿದ್ದು, ಮತ್ತೊಬ್ಬರಿಗೆ ಜೀವದಾನ ಮಾಡಲು ಯುವಕರು ಮುಂದಾಗಬೇಕು ಎಂದು ಹೇಳಿದರು.
ಮೋದಿ ಜನ್ಮದಿನದ ಅಂಗವಾಗಿ ೬ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನವಭಾರತ ಮೇಳ, ರಕ್ತದಾನ ಶಿಬಿರ, ಆಜಾದಿಕೆ ಅಮೃತ್ ಮಹೋತ್ಸವ, ದೀನ್ ದಯಾಳ್ ಉಪಾಧ್ಯಾಯರ ಅಂತ್ಯೋದಯ ಕಲ್ಪನೆ, ಸ್ವಚ್ಛತಾ ಕಾರ್ಯಕ್ರಮ, ನಮೋಕ್ವಿಜ್ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಯುವ ಮೋರ್ಚಾ ಸದಸ್ಯ ಮಹೇಶ್ ತಿಮ್ಮಯ್ಯ, ಮೂಡಾ ಅಧ್ಯಕ್ಷÀ ರಮೇಶ್ ಹೊಳ್ಳ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶ್ವಿನ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಂಜನ್, ವಿನಯ್ ರಾಜ್, ಪವನ್, ಜಿಲ್ಲಾ ಕಾರ್ಯದರ್ಶಿ ಪ್ರೀತಮ್, ವಿಷ್ಣು, ಹಿತೇಶ್, ಜಿಲ್ಲಾ ಸದಸ್ಯರಾದ ಸುನಿಲ್, ಹೇಮಂತ್, ಮಡಿಕೇರಿ ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರೀತು, ವಿಘ್ನೇಶ್, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ಹೇಮಂತ್, ಚೇತನ್, ಸೋಮವಾರಪೇಟೆ ಮಂಡಲ ಪ್ರಧಾನ ಕಾರ್ಯದರ್ಶಿ ಪದ್ಮಾನಾಭ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.