ಮಡಿಕೇರಿ, ಸೆ. ೨೨: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ. ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.೧ ಲಕ್ಷ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ ೨೨ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜ.hosಣeಟs@ ಞಚಿಡಿಟಿಚಿಣಚಿಞಚಿ.gov.iಟಿ ಗೆ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕಾದ ಸಹಾಯವಾಣಿ ದೂ. ೦೮೦-೮೦೫೦೩೭೦೦೦೬.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮತ್ತು ತಾಲೂಕು ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ. ಜಿಲ್ಲಾ ಕಚೇರಿ ಮಡಿಕೇರಿ ಮೊ.ಸಂಖ್ಯೆ ೯೪೪೮೨೦೫೯೧೯, ಮಡಿಕೇರಿ ತಾಲೂಕು ಕಚೇರಿ ಮೊ.ಸಂಖ್ಯೆ: ೯೪೮೦೩೫೬೪೦೯, ವೀರಾಜಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ :೮೭೬೨೪೭೬೭೯೦, ಸೋಮವಾರಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ: ೮೬೬೦೦೧೯೦೪೨ನ್ನು ಕಚೇರಿ ವೇಳೆಯಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ
ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಪಶುಭಾಗ್ಯ ಫಲಾನುಭವಿಗಳ ಆಧಾರಿತ “ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ ಕಾರ್ಯಕ್ರಮದಡಿ ಸಾಮಾನ್ಯ-೨೫, ಪ.ಜಾತಿ-೩, ಪ.ಪಂ-೨ ಒಟ್ಟು ೩೦ ಹೈನುಗಾರಿಕೆ ಘಟಕ (ಘಟಕ ವೆಚ್ಚ ೬೨,೦೦೦ ಒಂದು ಮಿಶ್ರತಳಿ ಹಾಲು ಕರೆಯುವ ಹಸು ಎಚ್‌ಎಫ್, ಜೆಆರ್, ಸಹಾಯಧನ ಪರಿಶಿಷ್ಟ ಜಾತಿ/ ಪಂಗಡ (ಶೇ.೩೩.೩೩) ಸಾಮಾನ್ಯ ಶೇ.೨೫ ಸಹಾಯಧನ) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿ ಆಧಾರಿತ ಕಾರ್ಯಕ್ರಮಕ್ಕೆ ಆದ್ಯತೆಯ ಮೇರೆಗೆ ಫಲಾನುಭವಿಗಳನ್ನು ಕೂಲಿ ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.೩೩ ರಷ್ಟು, ಅಲ್ಪಸಂಖ್ಯಾತರಿಗೆ (ಶೇ.೧೫) ಹಾಗೂ ವಿಶೇಷಚೇತನರಿಗೆ ಕನಿಷ್ಟ ಶೇ.೩ ರಷ್ಟು ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡುವ ಜಾತಿ ಪ್ರ‍್ರಮಾಣ ಪತ್ರವನ್ನು ಹೊಂದಿರಬೇಕು (ಪ್ರಮಾಣ ಪತ್ರದಲ್ಲಿ ಆರ್‌ಡಿ ನಂಬರ್ ಇರಬೇಕು) ಎಂದು ತಿಳಿಸಿದೆ.
ಆಸಕ್ತ ಫಲಾನುಭವಿಗಳು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಮಡಿಕೇರಿ ೯೪೪೮೬೪೭೨೭೬, ವೀರಾಜಪೇಟೆ ೭೬೨೪೯೬೨೧೦೦, ಪೊನ್ನಂಪೇಟೆ ೯೪೪೯೦೮೧೩೪೩, ಸೋಮವಾರಪೇಟೆ ೯೪೪೮೬೫೫೬೬೦, ಕುಶಾಲನಗರ ೮೯೫೧೪೦೪೦೨೫ ಇವರನ್ನು ಸಂಪರ್ಕಿಸಬಹುದು. ಅರ್ಜಿಗಳನ್ನು ಭರ್ತಿ ಮಾಡಿ ಅಕ್ಟೋಬರ್ ೧೫ ರೊಳಗೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪ ನಿರ್ದೇಶಕರಾದ ಸುರೇಶ್ ಭಟ್ ಅವರು ತಿಳಿಸಿದ್ದಾರೆ.