ಮಡಿಕೇರಿ, ಸೆ. ೨೨: ಜಿಲ್ಲೆಯಲ್ಲಿ ಬುಧವಾರ ೨೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟಿವೆ.

ಮಡಿಕೇರಿ ತಾಲೂಕಿನಲ್ಲಿ ೫, ಸೋಮವಾರಪೇಟೆ ತಾಲೂಕಿನಲ್ಲಿ ೬, ವೀರಾಜಪೇಟೆ ತಾಲೂಕಿನಲ್ಲಿ ೧೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೪,೬೩೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೩,೬೩೨ ಮಂದಿ ಗುಣಮುಖರಾಗಿದ್ದಾರೆ. ೫೮೨ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಯಾವುದೇ ಸಾವು ಉಂಟಾಗಿಲ್ಲ, ಇದುವರೆಗೆ ಒಟ್ಟು ೪೨೪ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೫೨ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೦.೭೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.