ಮಡಿಕೇರಿ, ಸೆ. ೨೨: ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಅಕ್ಟೋಬರ್ ೧೭ ರಂದು ಜರುಗುವ ಹಿನ್ನೆಲೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬAಧ ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿ ಕೊಳ್ಳುವಂತೆ ನಿರ್ದೇಶನ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು. ವೈದ್ಯರು, ಶುಶ್ರೂಷಕರು, ಆ್ಯಂಬ್ಯುಲೆನ್ಸ್ಗಳ ವ್ಯವಸ್ಥೆ ಹಾಗೂ ಅಗತ್ಯ ತಂಡಗಳನ್ನು ನಿಯೋಜಿಸುವಂತೆ ಸೂಚನೆ ನೀಡಿದರು.
ಭಾಗಮಂಡಲ ಗ್ರಾ.ಪಂ. ವತಿಯಿಂದ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಸ್ವಚ್ಛತೆಗೆ ಒತ್ತು ನೀಡುವುದು, ಕುಡಿಯುವ ನೀರು ಪೂರೈಕೆ, ಶೌಚಾಲಯ, ವಾಹನ ನಿಲುಗಡೆ ನಿರ್ವಹಣೆಗೆ ವ್ಯವಸ್ಥೆ ಆಗಬೇಕು.
ಲೋಕೋಪಯೋಗಿ ಇಲಾಖೆ ಯಿಂದ ಮಡಿಕೇರಿಯಿಂದ ತಲಕಾವೇರಿಯವರೆಗೆ ರಸ್ತೆಗಳಲ್ಲಿನ ಗುಂಡಿ ಮುಚ್ಚುವುದು, ರಸ್ತೆ ಬದಿ ಗಿಡಗಳನ್ನು
(ಮೊದಲ ಪುಟದಿಂದ) ಕಡಿಯುವುದು ಮತ್ತಿತರ ಕ್ರಮಗಳನ್ನು ವಹಿಸುವಂತೆ ಸಂಬAಧಿಸಿದವರಿಗೆ ನಿರ್ದೇಶನ ನೀಡಿದರು.
ನೀರಾವರಿ ಇಲಾಖೆ ವ್ಯಾಪ್ತಿಯ ಭಾಗಮಂಡಲ ರಸ್ತೆ ಸರಿಪಡಿಸುವುದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವತಿಯಿಂದ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡುವುದು ಹಾಗೂ ತುಲಾ ಸಂಕ್ರಮಣ ದಿನದಂದು ಅಗತ್ಯ ಬಸ್ಗಳ ನಿಯೋಜನೆಗೆ ಸಂಬAಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮಾತನಾಡಿ, ತುಲಾ ಸಂಕ್ರಮಣಕ್ಕೆ ಪೊಲೀಸ್ ಇಲಾಖೆ ವತಿಯಿಂದ ಪೊಲೀಸರು ಮತ್ತು ಹೋಂ ಗಾರ್ಡ್ಗಳ ನಿಯೋಜನೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಪವಿತ್ರ ತೀರ್ಥೋದ್ಭವ ಸಂಬAಧ ವಿವಿಧ ಇಲಾಖೆಗಳು ಕಳೆದ ಬಾರಿಯಂತೆ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಜೊತೆ ಕೈಜೋಡಿಸುವಂತೆ ತಿಳಿಸಿದರು.
ಭಾಗಮಂಡಲ-ತಲಕಾವೇರಿ ದೇವಾಲಯಗಳ ಕಾರ್ಯ ನಿರ್ವಹಣಾಧಿಕಾರಿ ಬಿ.ಎಂ. ಕೃಷ್ಣಪ್ಪ ಪವಿತ್ರ ತೀರ್ಥೋದ್ಭವಕ್ಕೆ ದೇವಾಲಯ ವತಿಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ತೀರ್ಥೋದ್ಭವ ಸಂಬAಧ ವಿವಿಧ ಇಲಾಖೆಗಳು ಕೈಜೋಡಿಸುವಂತೆ ಮನವಿ ಮಾಡಿದರು.
ಕಳೆದ ಬಾರಿ ದಾಸೋಹವನ್ನು ದೇವಾಲಯ ವತಿಯಿಂದ ಏರ್ಪಡಿಸಲಾಗಿತ್ತು, ಈ ಬಾರಿ ದಾನಿಗಳು ಮುಂದೆ ಬಂದಿದ್ದು, ಅವಕಾಶ ನೀಡಿದ್ದಲ್ಲಿ ಅನ್ನದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ತಲಕಾವೇರಿ ತೀರ್ಥೋದ್ಭವ ಸಂಬAಧ ಕೋವಿಡ್ ಮಾರ್ಗಸೂಚಿ ಪಾಲಿಸುವ ಬಗ್ಗೆ ಜಾಗೃತಿ ಮೂಡಿಸಲಾಗುವುದು. ವೈದ್ಯರ ತಂಡ ಹಾಗೂ ಆಂಬ್ಯುಲೆನ್ಸ್ ನಿಯೋಜನೆ ಮತ್ತಿತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು
ತೀರ್ಥೋದ್ಭವ ಸ್ಥಳಕ್ಕೆ ತೆರಳುವವರಿಗೆ ಆರ್ಟಿಪಿಸಿಆರ್ ಪರೀಕ್ಷೆ ಅಗತ್ಯವಿದ್ದಲ್ಲಿ, ಅಕ್ಟೋಬರ್ ೧೩ ಮತ್ತು ೧೪ ರಂದು ಆರ್ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು ಎಂದರು.
ತಾ.ಪಂ. ಇಒ ಶೇಖರ್ ಪಂಚಾಯತ್ ರಾಜ್ ಇಲಾಖೆಯಿಂದ ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ ಮತ್ತಿತರ ಸಂಬAಧ ಕಳೆದ ಬಾರಿಯಂತೆ ವ್ಯವಸ್ಥೆ ಮಾಡಲಾಗು ವುದು ಎಂದರು.
ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ ಅವರು ಮಾತನಾಡಿ ಕೋವಿಡ್-೧೯ ಹಿನ್ನೆಲೆ ತೀರ್ಥೋದ್ಭವ ಸಂದರ್ಭದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಕಳೆದ ವರ್ಷ ಅವಕಾಶ ಇರಲಿಲ್ಲ ಎಂಬುದನ್ನು ಸಭೆಯ ಗಮನಕ್ಕೆ ತಂದರು.
ಲೋಕೋಪಯೋಗಿ ಇಲಾಖೆ ಇಇ ನಾಗರಾಜು ಅವರು ಮಡಿಕೇರಿ-ತಲಕಾವೇರಿವರೆಗೆ ರಸ್ತೆ ಗುಂಡಿ ಮುಚ್ಚಲಾಗುವುದು, ರಸ್ತೆ ಬದಿ ಗಿಡ ಕಡಿಯಲಾಗುವುದು ಎಂಬ ಭರವಸೆ ನೀಡಿದರು.
ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ, ಪವಿತ್ರ ತೀರ್ಥೋದ್ಭ ವದಂದು ವಿದ್ಯುನ್ಮಾನ ಮಾಧ್ಯಮ ಗಳಿಂದ ನೇರ ಪ್ರಸಾರವಾಗಲಿದ್ದು, ಆ ನಿಟ್ಟಿನಲ್ಲಿ ‘ಒಬಿ’ ವಾಹನ ನಿಲುಗಡೆಗೆ ಕಳೆದ ವರ್ಷದಂತೆ ಸ್ಥಳಾವಕಾಶ ಕಲ್ಪಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.
ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡೂ, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ, ಲೋಕೋಪಯೋಗಿ ಇಲಾಖೆ ಎಇಇ ಶಿವರಾಮ್, ಪೊಲೀಸ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ, ಪೌರಾಯುಕ್ತ ರಾಮದಾಸ್, ದೇವಾಲಯ ಸಿಬ್ಬಂದಿಗಳು ಇತರರು ಇದ್ದರು.