ಸೋಮವಾರಪೇಟೆ, ಸೆ. ೨೨: ಸೃಷ್ಟಿಯ ಚಿಗುರು ಕವಿಬಳಗ ಮತ್ತು ದೇವಿ ಪ್ರಜ್ವಲ್ ಅವರ ಪ್ರಾಯೋಜಕತ್ವದಲ್ಲಿ ತಾ. ೨೫ ರಂದು ಬೆಳಿಗ್ಗೆ ೯.೩೦ಕ್ಕೆ ಸ್ಥಳೀಯ ಮಹಿಳಾ ಸಮಾಜದಲ್ಲಿ ಕವಿಗೋಷ್ಠಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕವಿಬಳಗದ ಅಧ್ಯಕ್ಷ ಸುದರ್ಶನ್ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಪ್ರಬಾರ ಅಧ್ಯಕ್ಷ ಬಿ. ಸಂಜೀವ ಸುವರ್ಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪತ್ರಕರ್ತರ ಸಂಘದ ರಾಷ್ಟಿçÃಯ ಮಂಡಳಿ ಸದಸ್ಯ ಎಸ್.ಎ. ಮುರಳೀಧರ್, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಕೆ.ಎನ್. ದೀಪಕ್, ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಕೆ.ಎ. ಪ್ರಕಾಶ್, ಮಹಿಳಾ ಸಮಾಜದ ಅಧ್ಯಕ್ಷೆ ಸುಮಾ ಸುದೀಪ್ ಪಾಲ್ಗೊಳ್ಳಲಿದ್ದಾರೆ.