ಪೊನ್ನAಪೇಟೆ, ಸೆ. ೨೨: ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಗಟ್ಟು ಗ್ರಾಮದ ದೇವ ಕಾಲೋನಿಯ ನಿವಾಸಿ ದಿ.ಗಣೇಶ್ ಎಂಬುವವರ ಮಗ ಹೆಚ್.ಜಿ.ಮೋಹನ್ (೩೨) ಎಂಬವನನ್ನು ತನ್ನ ಮನೆಯ ಹಿಂಭಾಗದ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪದಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ತಾ. ೨೨ ರಂದು ಹಳ್ಳಿಗಟ್ಟು ಗ್ರಾಮದ ದೇವ ಕಾಲೋನಿಯ ನಿವಾಸಿಯಾದ ಮೋಹನ್ ತನ್ನ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದಾಗಿ ಗೋಣಿಕೊಪ್ಪ ವೃತ್ತ ನಿರೀಕ್ಷಕ ಎಸ್.ಎನ್.ಜಯರಾಮ್ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆರೋಪಿ ಮೋಹನ್ ನನ್ನು ಬಂಧಿಸಲಾಗಿದೆ. ಆರೋಪಿ ತನ್ನ ಮನೆಯ ಆವರಣದಲ್ಲಿ ಬೆಳೆದಿದ್ದ ರೂ.೫೦ ಸಾವಿರ ಮೌಲ್ಯದ, ಎರಡೂವರೆ ಕೆಜಿ ತೂಕದ
೯ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು
(ಮೊದಲ ಪುಟದಿಂದ) ಆರೋಪಿಯ ವಿರುದ್ಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಯ ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಕೊಡಗು ಎಸ್.ಪಿ ಕ್ಷಮಾಮಿಶ್ರ ಹಾಗೂ ವೀರಾಜಪೇಟೆ ತಾಲೂಕು ಡಿವೈಎಸ್ ಪಿ ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಗಾಂಜಾ ಪ್ರಕರಣದ ಪತ್ತೆ ಕಾರ್ಯಾಚರಣೆ ಯಲ್ಲಿ ಗೋಣಿಕೊಪ್ಪ ವೃತ್ತ ನಿರೀಕ್ಷಕ ಎಸ್.ಎನ್. ಜಯರಾಮ್, ಪೊನ್ನಂಪೇಟೆ ಠಾಣಾಧಿಕಾರಿ ಡಿ.ಕುಮಾರ್ ಹಾಗೂ ಸಿಬ್ಬಂದಿಗಳಾದ ಎಂ.ಡಿ.ಮನು, ಪಿ.ಎ.ಮಹಮದ್ ಅಲಿ, ಕೆ.ಎಸ್.ಮಹೇಂದ್ರ, ಅಬ್ದುಲ್ ಮಜೀದ್, ಮಹದೇಶ್ವರ ಸ್ವಾಮಿ, ಹೇಮಲತಾ ರೈ, ಅಬ್ದುಲ್ ಬಷೀರ್ ಅವರು ಭಾಗವಹಿಸಿದ್ದರು.
ಮಾಹಿತಿ ನೀಡಲು ಮನವಿ ಕೊಡಗು ಜಿಲ್ಲೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುವಿಕೆ ಮತ್ತು ಮಾರಾಟ, ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ವಸ್ತುಗಳ ಬಳಕೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಸಹಕರಿಸುವಂತೆ ಕೋರಲಾಗಿದೆ. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗು ವುದು ಎಂದು ಪೊಲೀಸರು ಕೋರಿದ್ದಾರೆ.