ಕೂಡಿಗೆ, ಸೆ. ೨೩: ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಮಕ್ಕಳ ಕಾನೂನು ಮತ್ತು ಸಹಾಯವಾಣಿ ಹಾಗೂ ಮಕ್ಕಳ ರಕ್ಷಣೆ ಕುರಿತು ವಿಚಾರಗೋಷ್ಠಿ ಹಾಗೂ ಅರಿವು ಕಾರ್ಯಕ್ರಮ ನಡೆಯಿತು. ಪೊಲೀಸ್ ಇಲಾಖೆಯ ೧೧೨ ಹಾಗೂ ಮಕ್ಕಳ ಸಹಾಯವಾಣಿ ೧೦೯೮ರ ಕುರಿತು ಮಕ್ಕಳಿಗೆ ಸಮಗ್ರವಾದ ಮಾಹಿತಿಯನ್ನು ಪೊಲೀಸ್ ಪೇದೆಗಳಾದ ಎಸ್.ಕೆ. ಪ್ರಸನ್ನ, ಹರ್ಷಾವರ್ತಿ, ಬಿ.ಕೆ. ಕುಮಾರಿ, ಮಂಜುಳ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸಿ. ದುರ್ಗೇಶ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಶಿಕ್ಷಕರಾದ ಶಿವಪ್ರಸಾದ್, ಮೋಹನೇಶ್ವರಿ, ಎನ್. ಪುಪ್ಪು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.