ವಾರ್ಷಿಕ ಪ್ರಶಸ್ತಿ ಪ್ರದಾನ

*ಗೋಣಿಕೊಪ್ಪ, ಸೆ. ೨೩: ಪೊನ್ನಂಪೇಟೆ ತಾಲೂಕು ಪತ್ರಕರ್ತರ ಸಂಘ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿ ಅಸ್ತಿತ್ವಕ್ಕೆ ತರಲು ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

ಕಾವೇರಿ ಮಹಿಳಾ ಸಮಾಜ ಸಭಾಂಗಣದಲ್ಲಿ ಸಣ್ಣುವಂಡ ಕಿಶೋರ್‌ನಾಚಪ್ಪ ಅಧ್ಯಕ್ಷತೆಯಲ್ಲಿ ನಡೆದ ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಯಿತು.

ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಚಟುವಟಿಕೆ, ತಾಲೂಕು, ಜಿಲ್ಲಾ ಪಂಚಾಯಿತಿ ಕ್ಷೇತ್ರ ಕೂಡ ವಿಂಗಡಣೆ ಮಾಡಲಾಗಿದೆ. ಅಭಿವೃದ್ಧಿ ದೃಷ್ಠಿಯಿಂದ ಸಂಘದ ಸ್ಥಾಪನೆ ಅವಶ್ಯ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಸಂಘದ ಮೂವರು ಸದಸ್ಯರು ಪೊನ್ನಂಪೇಟೆಯಲ್ಲಿ ಸಂಘದ ಸ್ಥಾಪಿಸಿಕೊಂಡಿರುವ ಬಗ್ಗೆ ಆಕ್ಷೇಪ ವ್ಯಕ್ತವಾಯಿತು.

ಪ್ರಶಸ್ತಿ ಪ್ರದಾನ: ಪತ್ರಕರ್ತರ ಸಂಘದ ರಾಷ್ಟಿçÃಯ ಸಮಿತಿ ಸದಸ್ಯ ಎಸ್.ಎ. ಮುರುಳಿಧರ್ ಸಹೋದರ ಗಣೇಶ್ ಜ್ಞಾಪಕಾರ್ಥದ ಕ್ರೀಡಾ ವರದಿ ಪ್ರಶಸ್ತಿ ವಿಜೇತ ಕನ್ನಡಪ್ರಭ ಪತ್ರಿಕೆ ವರದಿಗಾರ ಮಂಡೇಡ ಎಸ್. ಅಶೋಕ್, ರಾಜ್ಯ ಸಮಿತಿ ಸದಸ್ಯ ಅಜ್ಜಮಾಡ ರಮೇಶ್ ಕುಟ್ಟಪ್ಪ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಜ್ಞಾಪಕಾರ್ಥದ ಗ್ರಾಮೀಣ ವರದಿ ಪ್ರಶಸ್ತಿ ಪಡೆದ ಶಕ್ತಿ ವರದಿಗಾರ ಎ. ಎನ್. ವಾಸು, ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷರಾಗಿದ್ದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಂದೆ ಸಣ್ಣುವಂಡ ಮಾದಪ್ಪ, ತಾಯಿ ಜಾನಕಿ ಮಾದಪ್ಪ ಜ್ಞಾಪಕಾರ್ಥದ ಪರಿಸರ ವರದಿ ಪ್ರಶಸ್ತಿ ಪಡೆದ ಶಕ್ತಿ ವರದಿಗಾರ ಅಮ್ಮಣಿಚಂಡ ಪ್ರವೀಣ್ ಚಂಗಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲಾ ಪ್ರಶಸ್ತಿ ವಿಜೇತ ಸಣ್ಣುವಂಡ ಕಿಶೋರ್ ನಾಚಪ್ಪ, ರೆಜಿತ್‌ಕುಮಾರ್ ಗುಹ್ಯ, ಎಚ್. ಕೆ. ಜಗದೀಶ್, ಪಳೆಯಂಡ ಪಾರ್ಥ ಚಿಣ್ಣಪ್ಪ, ಆರ್. ಸುಬ್ರಮಣಿ ಅವರನ್ನು ಸನ್ಮಾನಿಸಲಾಯಿತು.

ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರ ಬಿ. ಚೇತನ್ ಮಾತನಾಡಿ, ಸಮಾಜ ಮಾಧ್ಯಮದಿಂದ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದು, ದೇಶದ ಅಭಿವೃದ್ಧಿಯಲ್ಲಿಯೂ ಮುಖ್ಯ ಪಾತ್ರ ವಹಿಸಿದೆ ಎಂದರು.

ಪೊನ್ನAಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ವೆಂಕಟೇಶ್ ಮಾತನಾಡಿ, ಪತ್ರಿಕೆ ಓದುವ ಹವ್ಯಾಸ ಹೆಚ್ಚಿಸಿಕೊಳ್ಳಬೇಕು. ಜ್ಞಾನಾರ್ಜನೆ ಹೆಚ್ಚಾಗಲಿದೆ ಎಂದರು.

ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಎಂ. ಮಂಜುಳ ಮಾತನಾಡಿ, ಜನರಲ್ಲಿ ಸ್ವಚ್ಛತೆ ಜಾಗೃತಿ ಮೂಡಿಸಲು ಮಾಧ್ಯಮದ ಪಾತ್ರ ಕೂಡ ಹೆಚ್ಚಿದೆ ಎಂದರು.

ಕೊರೊನಾದಿAದ ಮೃತಪಟ್ಟ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ವರದಿ ವಾಚಿಸಿದರು. ಖಜಾಂಚಿ ವಿ.ವಿ. ಅರುಣ್‌ಕುಮಾರ್ ಲೆಕ್ಕಪತ್ರ ಮಂಡಿಸಿದರು. ರೇಖಾ ಗಣೇಶ್ ಪ್ರಾರ್ಥಿಸಿದರು.

ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರ್. ಸುಬ್ರಮಣಿ, ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷೆ ಬಿ.ಆರ್. ಸವಿತಾರೈ, ರಾಜ್ಯ ಸಮಿತಿ ಸದಸ್ಯ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಷ್ಟಿçÃಯ ಸಮಿತಿ ಸದಸ್ಯ ಎಸ್.ಎ. ಮುರುಳಿಧರ್, ವೀಕ್ಷಕ ಕೆ.ಎ. ಆದಿತ್ಯ ಇದ್ದರು.