ಸಿದ್ದಾಪುರ, ಸೆ. ೨೩: ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯ ತಟ್ಟಳ್ಳಿ ಹಾಡಿಯ ನಿವಾಸಿಗಳು ಲಸಿಕೆಗಳನ್ನು ಪಡೆದುಕೊಳ್ಳುವಂತೆ ಮಾಲ್ದಾರೆ ಗ್ರಾ.ಪಂ. ಅಧ್ಯಕ್ಷ ಸಮೀರ್ ಜಾಗೃತಿ ಮೂಡಿಸಿದರು.
ತಟ್ಟಳ್ಳಿ ವ್ಯಾಪ್ತಿಯ ಹಾಡಿಗಳಿಗೆ ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರುಗಳು ಭೇಟಿ ನೀಡಿ ಹಾಡಿಗಳಲ್ಲಿ ಲಸಿಕೆ ಪಡೆಯದೇ ಇರುವವರನ್ನು ಭೇಟಿ ಮಾಡಿದರು. ನಂತರ ಕೋವಿಡ್-೧೯ ರ ಲಸಿಕೆಯನ್ನು ಪ್ರತಿಯೊಬ್ಬರು ಪಡೆದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಅಲ್ಲದೇ ತಟ್ಟಳ್ಳಿ ಹಾಡಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿಗೆ ಗ್ರಾ.ಪಂ. ಅಧ್ಯಕ್ಷ ಸಮೀರ್ ಹಾಗೂ ಸದಸ್ಯೆ ಶೋಭ ಸ್ಪಂದಿಸಿದರು. ಮುಂದಿನ ದಿನಗಳಲ್ಲಿ ಈ ಭಾಗದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು.