ಕೂಡಿಗೆ, ಸೆ. ೨೩: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿಯಲ್ಲಿ ಕೆ.ಡಿ.ಪಿ.ಯ ಪ್ರಥಮ ತ್ರೆöÊಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗೀರತಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಕೆ.ಡಿ.ಪಿ. ಗ್ರಾಮ ಮಟ್ಟದ ಸಭೆಯಲ್ಲಿ ಹೋಬಳಿ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ಸಮಗ್ರವಾದ ವಾರ್ಷಿಕ ಮಾಹಿತಿಯನ್ನು ನೀಡಬೇಕು. ಆದರೆ ಶಿರಂಗಾಲದಲ್ಲಿ ನಡೆದ ಸಭೆಯಲ್ಲಿ ಪ್ರಮುಖವಾಗಿ ಭಾಗವಹಿಸಬೇಕಾಗಿದ್ದ ಚೆಸ್ಕಾಂ (ವಿದ್ಯುತ್) ಇಲಾಖೆ, ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ನಡೆಯುವ ಗ್ರಾಮ ಸಭೆಗೆ ಬರುವಂತೆ ತಿಳುವಳಿಕೆ ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಹಾಜರಿದ್ದ ಕೃಷಿ ಇಲಾಖೆ, ರೇಷ್ಮೆ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಸಂಬAಧ ಮಾಹಿತಿ ನೀಡಿದರು.

ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚು ಕೃಷಿ ಭೂಮಿಯನ್ನು ಹೊಂದಿರುವ ಮತ್ತು ಹೆಚ್ಚಾಗಿ ಕೃಷಿಯನ್ನೇ ಅವಲಂಬಿಸಿರುವ ಸಾವಿರಾರು ಗ್ರಾಮಸ್ಥರು ಇರುವುದರಿಂದ ಇಲಾಖೆಯ ವತಿಯಿಂದ ರೈತರಿಗೆ ಸಿಗುವ ಸವಲತ್ತುಗಳ ಮಾಹಿತಿಯನ್ನು ರೈತರಿಗೆ ನೀಡುವಂತಾಗಬೇಕೆAದು ಪಂಚಾಯಿತಿ ಅಧ್ಯಕ್ಷೆ ಭಾಗೀರತಿ ತಿಳಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್, ಕೆ.ಡಿ.ಪಿ. ಸಭೆಯ ನಿಯಮಾವಳಿಗಳನ್ನು ಮತ್ತು ಸಭೆಯ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಧರ್ಮಪ್ಪ, ಸದಸ್ಯರಾದ ಸವಿತ, ಲತಾಬಾಯಿ ಹಾಜರಿದ್ದರು.