ಮಡಿಕೇರಿ, ಸೆ. ೨೩: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳು ಸುಂಟಿಕೊಪ್ಪದ ವಿಕಾಸ್ ಜನಸೇವಾ ಟ್ರಸ್ಟ್ ವೃದ್ಧಾಶ್ರಮದಲ್ಲಿ ಆಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ದರ್ಶನ್ ಜೋಯಪ್ಪ, ಬಿಜೆಪಿ ರಾಜ್ಯ ಯುವ ಮೋರ್ಚಾ ಸದಸ್ಯ ಮಹೇಶ್ ತಿಮ್ಮಯ್ಯ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್ ಚೆಂಗಪ್ಪ, ಯಶ್ವಿನ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಅಂಜನ್, ಗುಮ್ಮಟಿರ ಚೆಂಗಪ್ಪ, ವಿನಯ್ ರಾಜ್, ಸುನಿಲ್, ಜಿಲ್ಲಾ ಕಾರ್ಯದರ್ಶಿ ನವನೀತ್, ಸದಸ್ಯರಾದ ಪ್ರವೀಣ್, ರಾಮನಾಥನ್, ವಿನೋದ್ ಗಣಪತಿ, ಸೋಮವಾರಪೇಟೆ ಮಂಡಲ ಪ್ರಧಾನ ಕಾರ್ಯದರ್ಶಿ ಮೋಹಿತ್, ಶಕ್ತಿಕೇಂದ್ರ ಅಧ್ಯಕ್ಷ ವಿಘ್ನೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.