ಮಡಿಕೇರಿ, ಸೆ. ೨೫: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು “ಕುದುರೆ ಟಾಂಗ ಜಾಥಾ” ನಡೆಸಿದರು. ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ನಡೆದ ಜಾಥಾದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಅವರು ಟಾಂಗ ಏರಿ ಸರ್ಕಾರಗಳ ಬೆಲೆ ಏರಿಕೆ ನೀತಿಯನ್ನು ಖಂಡಿಸಿದರು.

ಕೆಪಿಸಿಸಿ ಮುಖಂಡರು ಹಾಗೂ ವಿವಿಧ ಜಿಲ್ಲೆಗಳ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.