ಕುಶಾಲನಗರ, ಸೆ. ೨೫: ಕುಶಾಲನಗರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಾ. ಸದಾಶಿವಯ್ಯ ಎಸ್ ಪಲ್ಲೇದ್ ಮತ್ತು ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕಿ ಪೆರುಬಾಯಿ ತುಳಸಿ ಸುಬ್ರಮಣಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಪಿ ಕೆ ರಾಜಶೇಖರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಲಬ್ ಕಾರ್ಯದರ್ಶಿ ಸುಮನ್ ಬಾಲಚಂದ್ರ, ಖಜಾಂಚಿ ಕೆ ಕೆ ಹೇಮಂತ್, ಹಿರಿಯ ಸದಸ್ಯರಾದ ಮೋಹನ್, ಮಾಜಿ ಅಧ್ಯಕ್ಷ ಕೊಡಗನ ಹರ್ಷ ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು ಸದಸ್ಯರು ಇದ್ದರು.