ಸೋಮವಾರಪೇಟೆ,ಸೆ.೨೫: ಇಲ್ಲಿಗೆ ಸಮೀಪದ ಕೋವರ್‌ಕೊಲ್ಲಿ ಟಾಟಾ ಕಾಫಿ ಸಂಸ್ಥೆ ವತಿಯಿಂದ ತಾಲೂಕಿನ ಐಗೂರು ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕರಾದ ಬೊಳಂದAಡ ಅಪ್ಪಯ್ಯ ಮಾತನಾಡಿ, ಪ್ರತಿಯೊಬ್ಬರೂ ವೈಯಕ್ತಿಕ ಹಾಗೂ ಸುತ್ತಲಿನ ಪರಿಸರ ಸ್ವಚ್ಛತೆಗೆ ಗಮನ ಹರಿಸಬೇಕು ಎಂದರು.
ವೈದ್ಯರಾದ ಸ್ಮಿತಾ ಮಾತನಾಡಿ, ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರದ ಪ್ರಾಮುಖ್ಯತೆ, ಮಕ್ಕಳ ಬೆಳವಣಿಗೆಯಲ್ಲಿ ಸಮತೋಲನ ಆಹಾರದ ಮಹತ್ವ ಹಾಗೂ ಸ್ವಚ್ಛತೆಯ ಕುರಿತು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಹವಾಗುಣ ಬದಲಾವಣೆ ವಿಷಯದ ಕುರಿತು ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರೊಂದಿಗೆ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. ಶಾಲಾ ಆವರಣದಲ್ಲಿ ನೆರಳಿನ ಸಸಿ, ಸೀಬೆ, ಚರ‍್ರಿ, ಬಟರ್ ಫ್ರೂಟ್ ಸೇರಿದಂತೆ ವಿವಿಧ ತಳಿಯ ಸಸಿಗಳನ್ನು ನೆಡಲಾಯಿತು. ಈ ಸಂದರ್ಭ ಟಾಟಾ ಕಾಫಿ ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು, ಸಹ ಶಿಕ್ಷಕರು ಇದ್ದರು.