ದೆಹಲಿಯ ರೋಹಿಣಿ ಕೋರ್ಟ್ನಲ್ಲಿ ಶೂಟೌಟ್: ಗ್ಯಾಂಗ್‌ಸ್ಟರ್ ಸೇರಿ ನಾಲ್ವರ ಸಾವು

ನವದೆಹಲಿ, ಸೆ. ೨೪: ರಾಜಧಾನಿ ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದರ್ ಮನ್ ಗೋಗಿ ಸೇರಿ ಕನಿಷ್ಟ ನಾಲ್ವರು ಮೃತಪಟ್ಟಿದ್ದಾರೆ. ವಕೀಲರ ಉಡುಪಿನಲ್ಲಿದ್ದ ಮೂವರು ದಾಳಿಕೋರರನ್ನು ರೋಹಿಣಿ ನ್ಯಾಯಾಲಯದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ದೆಹಲಿ ಪೊಲೀಸ್ ವಿಶೇಷ ಕೋಶ ತಿಳಿಸಿದೆ. ಜಿತೇಂದರ್ ಮನ್ ಗೋಗಿ ಎಂಬ ಗ್ಯಾಂಗ್ ಸ್ಟರ್‌ನ್ನು ದೆಹಲಿಯ ರೋಹಿಣಿ ಕೋರ್ಟ್ಗೆ ಇಂದು ಪೊಲೀಸರು ವಿಚಾರಣೆಗೆ ಕರೆತರುವ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಫೈರಿಂಗ್‌ನಲ್ಲಿ ಗ್ಯಾಂಗ್‌ಸ್ಟರ್ ಗೋಗಿ ಮೃತಪಟ್ಟಿದ್ದಾನೆ, ಅದಕ್ಕೆ ಪ್ರತಿಯಾಗಿ ಪೊಲೀಸರು ನಡೆಸಿದ ದಾಳಿಯಲ್ಲಿ ಮೂವರು ದಾಳಿಕೋರರು ಸಹ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ಯಾಂಗ್‌ಸ್ಟರ್ ಜಿತೇಂದರ್ ಮನ್ನ್ನನ್ನು ಕೋರ್ಟ್ ಆವರಣದಲ್ಲಿಯೇ ದಾಳಿಕೋರರು ಶೂಟೌಟ್‌ನಲ್ಲಿ ಕೊಂದು ಹಾಕಿದ್ದಾರೆ ಎಂದು ಬಾರ್ ಅಂಡ್ ಬೆಂಚ್ ದೃಢಪಡಿಸಿದೆ. ಇಂದಿನ ಈ ದಾಳಿ ಘಟನೆ ರಾಜಧಾನಿ ದೆಹಲಿಯ ಕೋರ್ಟ್ಗಳ ಆವರಣದಲ್ಲಿ ಭದ್ರತೆಯ ಬಗ್ಗೆ ಜನರಲ್ಲಿ ಆತಂಕ ಮತ್ತು ಪ್ರಶ್ನೆ ಹುಟ್ಟುವಂತೆ ಮಾಡಿದೆ.

ಐವರಿಕೋಸ್ಟ್ ಪ್ರಜೆ ಬಂಧನ: ೨.೫ ಕೋಟಿ ಮೌಲ್ಯದ ಗಾಂಜಾ ವಶ

ಬೆಂಗಳೂರು, ಸೆ. ೨೪: ಶಾಂಪೇನ್ ಬಾಟಲ್‌ಗಳಲ್ಲಿ ಎಂಡಿಎA ಕಿಸ್ಟಲ್ ಪೌಡರ್ ತುಂಬಿ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರಿಕೋಸ್ಟ್ ದೇಶದ ಪ್ರಜೆಯನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ೨೮ ವರ್ಷದ ದೋಸ್ಸೋ ಖಲೀಫಾ ಬಂಧಿತ ಆರೋಪಿಯಾಗಿದ್ದು, ಬಂಧಿತನಿAದ ೨.೫ ಕೋಟಿ ಮೌಲ್ಯದ ೨.೫ ಕೆ.ಜಿ. ಮೌಲ್ಯದ ಡ್ರಗ್ಸ್, ಒಂದು ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಖಲೀಫಾ ಕಳೆದ ಐದು ವರ್ಷಗಳ ಹಿಂದೆ ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದಿದ್ದನು. ಡ್ರಗ್ಸ್ ದಂಧೆಕೋರರ ಸಂಪರ್ಕ ಸಾಧಿಸಿ ನಿರಂತರವಾಗಿ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿರುದ್ಧ ೨೦೧೮ರಲ್ಲಿ ಬಾಗಲೂರು ಹಾಗೂ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಟೆಕ್ಕಿಗಳು, ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಎಂಡಿಎAಎ ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್. ಮುರುಗನ್ ಪ್ರತಿಕ್ರಿಯಿಸಿ, ಬಂಧಿತ ಆರೋಪಿ ನಗರದಲ್ಲಿ ನಡೆಯುವ ಹೈ-ಎಂಡ್ ಪಾರ್ಟಿಗಳ ಪ್ರಮುಖ ಡ್ರಗ್ಸ್ ಪೆಡ್ಲರ್‌ಗಳಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ. ಗೋವಾದ ಡ್ರಗ್ಸ್ ಪೆಡ್ಲರ್ ರೊಂದಿಗೆ ಸಂಪರ್ಕ ಸಾಧಿಸಿ ಅಲ್ಲಿ ಶಾಂಪೇನ್ ಬಾಟಲ್‌ಗಳಲ್ಲಿ ಎಂಎಡಿಎA ಕ್ರಿಸ್ಟಲ್ ಪೌಡರ್ ತುಂಬಿ ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದ. ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಿಗೆ ನಿರಂತರವಾಗಿ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಎಂದು ಮಾಹಿತಿ ನೀಡಿದರು. ಸದ್ಯ ಆರೋಪಿಯ ಸಂಪರ್ಕದಲ್ಲಿವರ ಶೋಧ ಕಾರ್ಯ ಮುಂದುವರೆದಿದೆ ಎಂದರು.

ರಾಜ್ಯದಲ್ಲಿ ೭೮೯ ಹೊಸ ಸೋಂಕು ಪ್ರಕರಣಗಳು ಪತ್ತೆ

ಬೆಂಗಳೂರು, ಸೆ. ೨೪: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಅಬ್ಬರ ಕೊಂಚ ಇಳಿಕೆಯಾಗಿದ್ದು, ೭೫೦ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ ೨೪ ಗಂಟೆಗಳಲ್ಲಿ ರಾಜ್ಯಾದ್ಯಂತ ಒಟ್ಟು ೭೮೯ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ೨೯,೭೧,೮೩೩ಕ್ಕೆ ಏರಿಕೆಯಾಗಿದೆ. ಅಂತೆಯೇ ಇದೇ ಅವಧಿಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ೮ ಮಂದಿ ಸೇರಿ ಒಟ್ಟು ೨೩ ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಮಹಾಮಾರಿಗೆ ಬಲಿಯಾದ ಒಟ್ಟಾರೆ ಸೋಂಕಿತರ ಸಂಖ್ಯೆ ೩೭,೭೦೬ಕ್ಕೆ ಏರಿಕೆಯಾಗಿದೆ. ೧೦೫೦ ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿAದ ಗುಣಮುಖರಾದವರ ಒಟ್ಟಾರೆ ಸಂಖ್ಯೆ ೨೯,೨೦,೭೯೨ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ ೭,೪೪೩ ರಾಜ್ಯದಲ್ಲಿ ೧೩,೩೦೬ ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಂದಿನ ಸೋಂಕು ಸಕರಾತ್ಮಕ ಪ್ರಮಾಣ ಶೇ. ೦.೫೮ರಷ್ಟಿದ್ದು, ಸಾವಿನ ದರ ಶೇ. ೨.೯೧ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ೧,೩೫,೫೮೧ ಕೋವಿಡ್ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೆಮಿಕಲ್ ಕಂಪೆನಿಯಲ್ಲಿ ಸಿಲಿಂಡರ್ ಸ್ಫೋಟ

ಬೆಂಗಳೂರು, ಸೆ. ೨೪: ತರಗುಪೇಟೆಯಲ್ಲಿ ನಿಗೂಢ ಸ್ಫೋಟವಾಗಿ ಇಬ್ಬರೂ ಮೃತಪಟ್ಟಿದ್ದು ಇದರ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ. ಆನೇಕಲ್‌ನ ಅತ್ತಿಬೆಲೆ ಬಳಿಯ ಲೇಟ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಗೊಂಡು ದುರ್ಘಟನೆ ಸಂಭವಿಸಿದೆ. ಬಾಯ್ಲರ್ ಸ್ಫೋಟದಿಂದ ಹೊಗೆ ೩ ಕಿ.ಮೀ. ವ್ಯಾಪಿಸಿದೆ. ಈಗಾಗಲೇ ೭ ಮಂದಿಗೆ ಗಾಯಗೊಂಡಿದ್ದು, ಓರ್ವ ಸಾವಿನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಲ್ಲಿ ಆತಂಕ ಎದುರಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್ ಭೇಟಿ ನೀಡಿದ್ದರು.