ಮಡಿಕೇರಿ, ಸೆ. ೨೫: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ಲೈನ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ದ್ವಿತೀಯ ಪಿಯುಸಿ ಮುಕ್ತಾಯದವರೆಗೂ ೨೪ ತಿಂಗಳು ಅಥವಾ ೨೦೨೩ ರ ಏಪ್ರಿಲ್ /ಮೇ ಮಾಹೆಯಲ್ಲಿ ನಡೆಯಲಿರುವ ಜೆಇಇ/ ನೀಟ್ ಪ್ರವೇಶ ಪರೀಕ್ಷೆಯವರೆಗೂ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ೧೦ ತಿಂಗಳು ಅಥವಾ ೨೦೨೨ ರ ಏಪ್ರಿಲ್/ ಮೇ ಮಾಹೆಯಲ್ಲಿ ನಡೆಯಲಿರುವ ಜೆ.ಇ.ಇ/ ನೀಟ್ ಪ್ರವೇಶ ಪರೀಕ್ಷೆಯವರೆಗೂ ಆನ್ಲೈನ್ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ತಾ. ೩೦ ರ ಸಂಜೆ ೫.೩೦ ರೊಳಗೆ ಸಲ್ಲಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-೦೮೨೭೨-೨೨೫೫೩೧. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-೦೮೨೭೨-೨೨೩೫೫೨. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-೦೮೨೭೬-೨೮೧೧೧೫ ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-೦೮೨೭೪-೨೪೯೪೭೬ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.