ಮಡಿಕೇರಿ, ಸೆ. ೨೪: ಗ್ರಾಮಲೆಕ್ಕಗರ ಹುದ್ದೆಗೆ ನೇಮಿಸಲು ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ಜಿಲ್ಲಾಡಳಿತದ ಲಾಂಛನದೊAದಿಗೆ ಜಿಲ್ಲಾಧಿಕಾರಿಗಳು ಪತ್ರ ಕಳುಹಿಸಿದಂತೆ ನಕಲಿ ಪತ್ರ ಕಳುಹಿಸಿ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಮಡಿಕೇರಿ ನಗರ ಪೊಲೀಸರು ಈರ್ವರನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾಡಳಿತದ ಲಾಂಛನವನ್ನು ಮುದ್ರಿಸಿ ಜಿಲ್ಲಾಧಿಕಾರಿಗಳು ಪತ್ರ ಕಳುಹಿಸಿದಂತೆ ನಂಜರಾಯಪಟ್ಟಣದ ಕೆ.ಎಂ. ಯಶ್ವಿತಾ ಎಂಬವರಿಗೆ ಮನೆ ವಿಳಾಸ ಸಹಿತ ಅಂಚೆ ಮೂಲಕ ನಕಲಿ ನೇಮಕಾತಿ ಪತ್ರ ಕಳುಹಿಸಿ ಕರೆ ಮಾಡಿ ರೂ. ೧.೫೦ ಲಕ್ಷ ಲಂಚದ ಬೇಡಿಕೆ ಇಟ್ಟಿರುವ ಬಗ್ಗೆ ಯಶ್ವಿತಾ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದರು. ಈ ಸಂಬAಧ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಿರಸ್ತೆದಾರ್ ಪ್ರಕಾಶ್ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಇಂದು ಈ ಬಗ್ಗೆ ತನಿಖೆ ಕೈಗೊಂಡ ನಗರ ಪೊಲೀಸ್ ಠಾಣಾಧಿಕಾರಿ ಅಂತಿಮ ಹಾಗೂ ತಂಡದವರು ಮಡಿಕೇರಿಯ ಚಂದ್ರಶೇಖರ್ ಹಾಗೂ ಗಣಪತಿ ಎಂಬರುಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಮೋಸದ ಜಾಲದ ಪ್ರಮುಖ ಆರೋಪಿ ತಲೆಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ.

ಇದೊAದು ಮಹಾ ವಂಚನೆಯ ಜಾಲವಾಗಿದ್ದು, ಸರಕಾರದ ಮುದ್ರೆ ಬಳಸಿರುವುದು ಘೋರ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.