ಮಡಿಕೇರಿ, ಸೆ. ೨೪: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಚಿತ ಶಿಕ್ಷಣವನ್ನು ನೀಡುತ್ತಿರುವ ವಸತಿ ಶಿಕ್ಷಣ ಸಂಸ್ಥೆಯಾದ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕೊಡಗು ಜಿಲ್ಲೆಯ ಸರಕಾರಿ/ಅರೆ ಸರಕಾರಿ/ಅನುದಾನಿತ/ ಸರಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರಾಥಮಿಕ ಶಾಲೆಯಲ್ಲಿ ಐದನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ.
ಅಭ್ಯರ್ಥಿ ದಿನಾಂಕ ೦೧.೦೫.೨೦೦೯ ರಿಂದ ೩೦.೦೪.೨೦೧೩ ರೊಳಗೆ ಜನಿಸಿದವರಾಗಿರಬೇಕು. ನವೆಂಬರ್ ೩೦ ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಈ ವೆಬ್ಅಡ್ರೆಸ್ ಅನ್ನು ವೀಕ್ಷಿಸಬಹುದು. ತಿತಿತಿ.ಟಿಚಿvoಜಚಿಥಿಚಿ.gov.iಟಿ ೨೦೨೨ರ ಏಪ್ರಿಲ್ ೩೦ ರಂದು ಪರೀಕ್ಷೆ ನಡೆಯಲಿದೆ ಎಂದು ಗಾಳಿಬೀಡು ನವೋದಯ ವಿದ್ಯಾಲಯದ ಪ್ರಾಂಶುಪಾಲ ಪಂಕಜಾಕ್ಷನ್ ಓ.ಎಂ. ಅವರು ತಿಳಿಸಿದ್ದಾರೆ.