ಮಡಿಕೇರಿ, ಸೆ. ೨೪: ತಾ. ೨೭ ಹಾಗೂ ತಾ. ೨೯ ರಂದು ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ೨೦೦ ಮೀ ಸುತ್ತಳತೆಯ ಪ್ರದೇಶ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಈ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಯಾವುದೇ ಜೆರಾಕ್ಸ್ ಅಂಗಡಿಗಳು ಪರೀಕ್ಷಾ ದಿನದಂದು ತೆರೆÀಯಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮಡಿಕೇರಿಯ ಸರಕಾರಿ ಪ.ಪೂ ಕಾಲೇಜು, ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸೋಮವಾರಪೇಟೆಯ ಸರಕಾರಿ ಪ.ಪೂ ಕಾಲೇಜು ಹಾಗೂ ವೀರಾಜಪೇಟೆಯ ಸರಕಾರಿ ಪ.ಪೂ ಕಾಲೇಜಿನಲ್ಲಿ ಪರೀಕ್ಷೆಗಳು ಜರುಗಲಿವೆ.