ಆಲೂರು-ಸಿದ್ದಾಪುರ, ಸೆ. ೨೫: ಆಲೂರು-ಸಿದ್ದಾಪುರ ಗ್ರಾ.ಪಂ.ಯ ೨೦೨೧-೨೨ನೇ ಸಾಲಿನ ಪ್ರಥಮ ಗ್ರಾಮಸಭೆ ತಾ. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ಗ್ರಾ.ಪಂ. ಅಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ಸಮೀಪದ ಅಂಕನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಮ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಆಲೂರು-ಸಿದ್ದಾಪುರ ಪಶು ವೈದ್ಯಾಧಿಕಾರಿ ಡಾ. ಶೈಲಜಾ ಕಾರ್ಯನಿರ್ವಹಿಸಲಿದ್ದು, ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡುತ್ತಾರೆ ಎಂದು ಗ್ರಾ.ಪಂ. ಪ್ರಕಟಣೆಯಲ್ಲಿ ತಿಳಿಸಿದೆ.

ಬೆಟ್ಟಗೇರಿ: ಬೆಟ್ಟಗೇರಿ ಗ್ರಾಮ ಪಂಚಾಯ್ತಿಯ ಗ್ರಾಮ ಸಭೆ ತಾ. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಅಧ್ಯಕ್ಷ ನಾಪಂಡ ರ‍್ಯಾಲಿ ಮಾದಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.