ಮಡಿಕೇರಿ, ಸೆ. ೨೪ : ಕೊಡಗು ಜಿಲ್ಲೆಯಲ್ಲಿ ಕೋವಿಡ್-೧೯ ಪಾಸಿಟಿವಿಟಿ ದರ ಶೇ. ೨ಕ್ಕಿಂತ ಕಡಿಮೆ ಇರುವುದರಿಂದ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಹಾಲಿ ಇರುವ ಪಾಸಿಟಿವಿಟಿ ದರವನ್ನು ಗಮನದಲ್ಲಿರಿಸಿಕೊಂಡು ಸರ್ಕಾರದ ಸಂಬAಧಪಟ್ಟ ಇಲಾಖೆಯ ಸುತ್ತೋಲೆಯನ್ನು ಆಧರಿಸಿ, ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-೧೯ ರೆಗ್ಯೂಲೇಷನ್ ೨೦೨೦, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್-೨೦೦೫ರ ಕಲಂ ೩೪ ಮತ್ತು ದಂಡಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ೧೪೪(೩)ರಡಿಯಲ್ಲಿ ಪ್ರದತ್ತವಾದ ಅಧಿಕಾರದಂತೆ ಚಲಾಯಿಸಿ ತಾ. ೨೭ ರಿಂದ ೬ ರಿಂದ ೮ನೇ ತರಗತಿಗಳಳನ್ನು ಆರಂಭಿಸುವAತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ೬ ರಿಂದ ೮ನೇ ತರಗತಿಗಳನ್ನು ಸಂಬAಧಪಟ್ಟ ಇಲಾಖೆಯ ಸುತ್ತೋಲೆಯಂತೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಕೋವಿಡ್-೧೯ SಔP) ಪಾಲಿಸಿ ತಾ.೨೭ ರಿಂದ ಪ್ರಾರಂಭಿಸುವುದು.
ಹಿಂದುಳಿದ, ಅಲ್ಪ ಸಂಖ್ಯಾತರ, ಸಮಾಜ ಕಲ್ಯಾಣ ಇತ್ಯಾದಿ ಇಲಾಖೆಗಳ ಹಾಸ್ಟೆಲ್‌ಗಳ ಅಧಿಕಾರಿ, ಸಿಬ್ಬಂದಿಗಳು ಕನಿಷ್ಟ ೧ ಕೋವಿಡ್-೧೯ ಲಸಿಕೆ ಪಡೆದಿರತಕ್ಕದ್ದು. ಶಾಲೆ, ವಿದ್ಯಾ ಸಂಸ್ಥೆ ಮತ್ತು ಹಾಸ್ಟೆಲ್‌ಗಳನ್ನು ನಿಯಮಾನುಸಾರ ಸ್ಯಾನಿಟೈಸ್ ಮಾಡುವುದು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ
(ಮೊದಲ ಪುಟದಿಂದ) ಕನಿಷ್ಟ ೧ ಕೋವಿಡ್-೧೯ ಲಸಿಕೆ ಪಡೆದಿರತಕ್ಕದ್ದು. ವಿದ್ಯಾರ್ಥಿಗಳ ಪಾಲಕರು ಕೋವಿಡ್-೧೯ ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳುವುದು. ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ, ಹಾಸ್ಟೆಲ್‌ಗಳಲ್ಲಿ ಒಂದು ಕೊಠಡಿಯನ್ನು ಐಸೋಲೇಷನ್ ಕೊಠಡಿ ಆಗಿ ಕಾಯ್ದಿರಿಸುವುದು. ಶಾಲಾ ಕಾಲೇಜು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನದಂತೆ ನಿಯಮಾನುಸಾರ ಸೂಕ್ತ ಕೆ.ಎಸ್.ಆರ್.ಟಿ.ಸಿ., ಖಾಸಗಿ ಸಾರಿಗೆ ವ್ಯವಸ್ಥೆ ಬಗ್ಗೆ ಕ್ರಮವಹಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶವು ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನೀಡುವ ನಿರ್ದೇಶನಗಳಿಗೆ ಒಳಪಟ್ಟಿರುತ್ತದೆ. ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಬದಲಾವಣೆಗಳನ್ನು ಜಿಲ್ಲಾಡಳಿತವು ಮುಂದಿನ ದಿನಗಳಲ್ಲಿ ನೀಡಲಿದೆ. ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ ೧೮೬೦, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ ೨೦೨೦, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ ೨೦೦೫ರಡಿ ಮತ್ತು ಸಂಬAಧಪಟ್ಟ ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ತಿಳಿಸಿದ್ದಾರೆ