ಮಡಿಕೇರಿ, ಸೆ. ೨೫: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಅ. ೩ ರಂದು ನಗರದ ಬಾಲಭವನದಲ್ಲಿ ನಡೆಯಲಿದೆ.

ಸಭೆಯಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ವೃತ್ತಿಪರ ಕೋರ್ಸ್ಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಶೇ. ೮೫ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿಯನ್ನು ತಾ. ೨೯ ರೊಳಗೆ ಸಂಘದ ಕಚೇರಿಗೆ ತಲುಪಿಸುವುದು. ನಂತರ ಬಂದ ಅರ್ಜಿಯನ್ನು ಮಾನ್ಯ ಮಾಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೨೭೨-೨೨೯೯೭೪, ೯೪೪೮೨೧೭೫೪೮ ಸಂಪರ್ಕಿಸಬೇಕೆAದು ಪ್ರಕಟಣೆಯಲ್ಲಿ ಸಮಿತಿ ತಿಳಿಸಿದೆ.