ಮಡಿಕೇರಿ, ಸೆ. ೨೬: ಕೊಡಗು ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ ೨ಕ್ಕಿಂತ ಕಡಿಮೆಯಾದ ಹಿನ್ನೆಲೆ ಜಿಲ್ಲೆಯಲ್ಲಿ ೬ ರಿಂದ ೮ನೇ ತರಗತಿಗಳು ತಾ. ೨೭ ರಿಂದ (ಇಂದಿನಿAದ) ಆರಂಭಗೊಳ್ಳಲಿವೆೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಿದ್ದು, ವಿದ್ಯಾರ್ಥಿಗಳು ಒಂದೂವರೆ ವರ್ಷಗಳ ಬಳಿಕ ಶಾಲೆ ಕಡೆ ಮುಖ ಮಾಡಲು ಉತ್ಸುಕರಾಗಿದ್ದಾರೆ.

ಈಗಾಗಲೇ ಶಿಕ್ಷಣ ಇಲಾಖೆ ಶಾಲೆ ಆರಂಭ ಕುರಿತಾಗಿ ಅಗತ್ಯ ಕ್ರಮವಹಿಸಿದೆ. ಈ ನಿಟ್ಟಿನಲ್ಲಿ ಶಿಕ್ಷಣಾಧಿಕಾರಿಗಳ ಸಭೆ ನಡೆಸಿ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ತರಗತಿಗಳು ನಡೆಸುವಂತೆ ನಿರ್ದೇಶನ ನೀಡಲಾಗಿದೆ. ತರಗತಿಗಳನ್ನು ಸ್ಯಾನಿಟೈಜ್ ಮಾಡಲಾಗಿದ್ದು, ಒಂದು ಮೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ವಾರದ ೫ ದಿನ ತರಗತಿ

ಸೋಮವಾರದಿಂದ ಶುಕ್ರವಾರದ ತನಕ ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧.೩೦ರ ತನಕ ತರಗತಿಗಳು ಒಂದೇ ಪಾಳಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಧರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಿಲ್ಲ. ಪೋಷಕರ ಒಪ್ಪಿಗೆ ಪತ್ರ ತಂದಲ್ಲಿ ಮಾತ್ರ ತರಗತಿಗೆ ಪ್ರವೇಶ ನೀಡಲಾಗುವುದು.

(ಮೊದಲ ಪುಟದಿಂದ) ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕಾö್ಯನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದರ ಜೊತೆಗೆ ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲಿಸಬೇಕು. ಭೌತಿಕ ತರಗತಿಗಳಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಕಲಿಕೆ ಮುಂದುವರೆಸಲಾಗುತ್ತದೆ. ಶಾಲೆಗಳು ಕಾರ್ಯನಿರ್ವಹಿಸುವ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಪಡೆದಿರಬೇಕು ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ೫೫೪ ಶಾಲೆಗಳಿದ್ದು, ೬ ರಿಂದ ೮ನೇ ತರಗತಿವರೆಗೆ ಓದುವ ಅಂದಾಜು ೧೫ ಸಾವಿರ ವಿದ್ಯಾರ್ಥಿಗಳಿದ್ದಾರೆ.

ಬಂದ್ ಭಯ ಬೇಡ

ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಕೊಡಗಿನಲ್ಲಿ ಚೇಂಬರ್ ಆಫ್ ಕಾಮರ್ಸ್, ಬಸ್, ಆಟೋ ಚಾಲಕರ ಹಾಗೂ ಮಾಲೀಕರ ಸಂಘಗಳು ಬೆಂಬಲ ನೀಡದ ಹಿನ್ನೆಲೆ ಯಾವುದೇ ವ್ಯತಿರಿಕ್ತ ಪರಿಣಾಮ ಸೃಷ್ಟಿಯಾಗುವುದಿಲ್ಲ. ಭಯ ಇಲ್ಲದೆ ತರಗತಿಗಳಿಗೆ ತೆರಳಬಹುದಾಗಿದೆ.