ಸೋಮವಾರಪೇಟೆ,ಸೆ. ೨೬: ಸಮೀಪದ ಯಡೂರು ಗ್ರಾಮದ ಸಿ.ಎ. ರವಿ ಹಾಗೂ ಭಾಗ್ಯ ದಂಪತಿ ಪುತ್ರ ಸಿ.ಆರ್. ಅಜಿತ್ ಅವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ೫೫ ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪ್ರದಾನ ಮಾಡಲಾಯಿತು.

ವಿಶ್ವವಿದ್ಯಾಲಯದ ಸಸ್ಯ ರೋಗ ಶಾಸ್ತç ವಿಭಾಗದ ಎಂ ಎಸ್ ಸಿ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಜಿತ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಕರ್ನಾಟಕ ರಾಜ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್, ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ರಾಜೇಂದ್ರ ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಅಜಿತ್ ಅವರು ಪ್ರಸ್ತುತ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಸ್ಯ ರೋಗ ಶಾಸ್ತç ವಿಭಾಗದಲ್ಲಿ ಪಿ.ಎಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.