ಕೂಡಿಗೆ, ಸೆ. ೨೬: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಸಿದ್ದಲಿಂಗಪುರ, ಅತ್ತೂರು, ಅರಿಸಿನಗುಪ್ಪೆ ಗ್ರಾಮಗಳಲ್ಲಿ ಪೊಲೀಸ್ ಬೀಟ್ ಸಭೆ ಮತ್ತು ಅರಿವು ಕಾರ್ಯಕ್ರಮ ಆಯಾ ಗ್ರಾಮದ ಸಮುದಾಯದ ಭವನದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ಕಾನೂನಿನ ಅರಿವು ಸೇರಿದಂತೆ ಪೊಲೀಸ್ ಮತ್ತು ಸಾರ್ವಜನಿಕರ ಸಂಬAಧ ಗ್ರಾಮಾಂತರ ಪ್ರದೇಶದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದರು.

ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ಕಾನೂನಿನ ಅರಿವು ಸೇರಿದಂತೆ ಪೊಲೀಸ್ ಮತ್ತು ಸಾರ್ವಜನಿಕರ ಸಂಬAಧ ಗ್ರಾಮಾಂತರ ಪ್ರದೇಶದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದರು.

ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ತಮ್ಮ ಗ್ರಾಮಗಳ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಮುಂಜಾಗ್ರತಾ ಕ್ರಮಗಳನ್ನು ತಿಳಿದುಕೊಳ್ಳಲು ಚರ್ಚೆಗಳು ನಡೆದವು

೧೧೨ ಪೊಲೀಸ್ ವಾಹನದ ಬಗ್ಗೆ ಮಾಹಿತಿ ಮತ್ತು ವಾಹನ ಸಂಚಾರ ವ್ಯವಸ್ಥೆಯ ಬಗ್ಗೆ ಅನುಸರಿಸಬೇಕಾಗುವ ನಿಯಮಗಳ ಬಗ್ಗೆ ಠಾಣೆಯ ಸಹಾಯಕ ಠಾಣಾಧಿಕಾರಿ ರವಿ ಮಾಹಿತಿ ನೀಡಿದರು.

ಈ ಸಂದರ್ಭ ಆಯಾ ಗ್ರಾಮಗಳ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಗ್ರಾಮದ ದೇವಾಲಯ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಗ್ರಾಮ ವ್ಯಾಪ್ತಿಯ ಸಂಘ-ಸAಸ್ಥೆಗಳ ಮುಖ್ಯಸ್ಥರು ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.