ಸೋಮವಾರಪೇಟೆ,ಸೆ.೨೬: ಕೊರೊನಾ ಲಾಕ್‌ಡೌನ್ ನಂತರ ಇದೀಗ ಶಾಲಾ ಕಾಲೇಜುಗಳು ಪ್ರಾರಂಭಗೊAಡಿದ್ದು, ಲಾಕ್‌ಡೌನ್ ಸಂದರ್ಭ ಸ್ಥಗಿತಗೊಂಡಿದ್ದ ಸರ್ಕಾರಿ ಬಸ್‌ಗಳ ಸೇವೆಯನ್ನು ಪುನರಾರಂಭಿಸಲು ಕ್ರಮ ವಹಿಸಬೇಕೆಂದು ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಶಾಲಾ ಕಾಲೇಜು ಆರಂಭಗೊAಡಿರುವುದರಿAದ ಈ ಹಿಂದಿನAತೆಯೇ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ತಾಲೂಕು ಕೇಂದ್ರದಿAದ ಮಡಿಕೇರಿ ಸೇರಿದಂತೆ ವಿವಿಧೆಡೆಗಳಿಗೆ ತೆರಳುವ ಸರಕಾರಿ ಹಾಗೂ ಖಾಸಗಿ ನೌಕರರು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಬೆಳಿಗ್ಗೆ ೮ ಗಂಟೆಯಿAದ ೯.೧೫ರ ವರೆಗೆ ಯಾವುದೇ ಸರಕಾರಿ ಬಸ್ ವ್ಯವಸ್ಥೆ ಇಲ್ಲ. ೮.೩೦ಕ್ಕೆ ಮಡಿಕೇರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಸೇವೆಯನ್ನು ಯಾವುದೇ ಸೂಚನೆ ನೀಡದೆ ನಿಲ್ಲಿಸಲಾಗಿದೆ. ಇದರಿಂದಾಗಿ ಸಮಸ್ಯೆ ಉಂಟಾಗಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.

ಡೀಸೆಲ್ ಬೆಲೆ ಏರಿಕೆಯಿಂದಾಗಿ ಖಾಸಗಿ ಬಸ್‌ಗಳಲ್ಲಿಯೂ ಪ್ರಯಾಣ ದರವನ್ನು ಏರಿಸಲಾಗಿದೆ. ಕೆಲವು ಬಸ್‌ಗಳಲ್ಲಿ ಸೋಮವಾರಪೇಟೆಯಿಂದ ಐಗೂರಿಗೆ ೨೫ ರೂ. ವಸೂಲಿ ಮಾಡುತ್ತಿದ್ದಾರೆ. ಮಡಿಕೇರಿಗೆ ೬೦ ರೂ.ಗಳನ್ನು ಪಡೆಯುತ್ತಿದ್ದಾರೆ. ಇದು ಪ್ರಯಾಣಿಕರಿಗೆ ಹೊರೆಯಾಗಲಿದೆ. ದರ ಏರಿಕೆ ಕುರಿತು ಖಾಸಗಿ ಬಸ್ ಮಾಲೀಕರ ಸಂಘ ಅಧಿಕೃತ ಪ್ರಕಟಣೆ ನೀಡದಿದ್ದರೂ ನಿರ್ವಾಹಕರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತಕ್ಷಣವೇ ಜಿಲ್ಲಾಧಿಕಾರಿಗಳು ಸಮರ್ಪಕ ಸಾರಿಗೆ ವ್ಯವಸ್ಥೆಯನ್ನು ಕೈಗೊಳ್ಳಲು ಮುಂದಾಗಬೇಕೆAದು ಪೋಷಕರು ಹಾಗೂ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.