ಸುರಕ್ಷತಾ ವಲಯದಿಂದ ಹೊರಹೋಗಬೇಡಿ-ಮೋದಿ

ನವದೆಹಲಿ, ಸೆ. ೨೬: ಕೋವಿಡ್ ಶಿಷ್ಠಾಚಾರಗಳನ್ನು ಪಾಲಿಸಿ ಲಸಿಕೆಯ 'ಸುರಕ್ಷತಾ ವಲಯ'ದಿಂದ ನಾಗರಿಕರು ಯಾರು ಕೂಡ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ ತಿಂಗಳಿನಿAದ ಸಾಲು ಸಾಲು ಹಬ್ಬಗಳು ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ಸಾಂಪ್ರದಾಯಿಕವಾಗಿ ಹಬ್ಬಗಳನ್ನು ಆಚರಿಸುವಂತೆ ಅವರು ದೇಶವಾಸಿಗಳಿಗೆ ತಮ್ಮ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ದಸರಾ ಹಬ್ಬ ಆರಂಭವಾಗುತ್ತದೆ, ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರ ದುಷ್ಟಶಕ್ತಿಗಳ ವಿರುದ್ಧ ಗೆದ್ದ ವಿಜಯದ ಸಂಕೇತವನ್ನು ಆಚರಿಸುತ್ತಿದ್ದು, ದುರ್ಗೆಯನ್ನು ಭಜಿಸುವ ಹೊತ್ತಿನಲ್ಲಿ ಕೋವಿಡ್ ಸೋಂಕಿನ ವಿರುದ್ಧ ಕೂಡ ಹೋರಾಡಬೇಕೆಂದು ನೆನಪು ಇಟ್ಟುಕೊಳ್ಳಬೇಕು ಎಂದರು. ಭಾನುವಾರದ ಮನ್ ಕಿ ಬಾತ್ ೮೧ನೇ ಸರಣಿಯಲ್ಲಿ ಮಾತನಾಡಿರುವ ಅವರು, ಟೀಮ್ ಇಂಡಿಯಾ ಈ ನಿಟ್ಟಿನಲ್ಲಿ ಪ್ರತಿದಿನ ಹಲವು ಸಾಧನೆಗಳನ್ನು ಮಾಡುತ್ತಿದೆ. ಲಸಿಕೆ ಅಭಿಯಾನದಲ್ಲಿ ಹಲವು ದಾಖಲೆಗಳನ್ನು ಮಾಡಿದ್ದು ಇಂದು ಭಾರತದ ಲಸಿಕೆ ಅಭಿಯಾನದ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತಿದೆ ಎಂದು ಹೇಳಿ ಸಂತೋಷಪಟ್ಟರು.

ಅನೇಕ ಜಿಲ್ಲೆಗಳಲ್ಲಿ ಬ್ಯಾಂಕಿAಗ್ ಅಸ್ತಿತ್ವವಿಲ್ಲ : ನಿರ್ಮಲಾ ಸೀತಾರಾಮನ್

ಮುಂಬೈ, ಸೆ. ೨೬: ಕೆಲ ಪ್ರದೇಶದಲ್ಲಿ ಹೆಚ್ಚಿನ ಮಟ್ಟದ ಆರ್ಥಿಕ ಚಟುವಟಿಕೆಗಳು ನಡೆಯುತ್ತಿದ್ದರೂ ಹಲವು ಜಿಲ್ಲೆಗಳಲ್ಲಿ ಬ್ಯಾಂಕಿAಗ್ ವ್ಯವಸ್ಥೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಭಾರತೀಯ ಬ್ಯಾಂಕುಗಳ ಸಂಘ(ಐಬಿಎ)ದ ಬ್ಯಾಂಕಿAಗ್ ಉದ್ಯಮ ಲಾಬಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಲದಾತರು ತಮ್ಮ ಅಸ್ತಿತ್ವವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನಗಳನ್ನು ಹೆಚ್ಚಿಸುವಂತೆ ಕೇಳಿದರು. ಇಟ್ಟಿಗೆ ಮತ್ತು ಗಾರೆ ಮಾದರಿಯ ಮೂಲಕ ಯಾವ ಸ್ಥಳಕ್ಕೆ ಬ್ಯಾಂಕಿAಗ್ ಉಪಸ್ಥಿತಿಯ ಅಗತ್ಯವಿದೆ. ಸ್ಟೆಪ್-ಡೌನ್ ಉಪಸ್ಥಿತಿ ಎಲ್ಲಿ ಸಹಾಯ ಮಾಡುತ್ತದೆ ಎಂಬುದನ್ನು ನಿರ್ಧರಿಸುವ ಆಯ್ಕೆಯನ್ನು ಸಾಲದಾತರಿಗೆ ನೀಡಿದರೆ, ಡಿಜಿಟಲೀಕರಣ ಮತ್ತು ಪ್ರಯತ್ನಗಳಿಗೆ ವಿರುದ್ಧವಾಗಿಲ್ಲ ಎಂದು ಸೀತಾರಾಮನ್ ಸ್ಪಷ್ಟಪಡಿಸಿದರು. ಮರು ಬಂಡವಾಳೀಕರಣದ ಅಗತ್ಯತೆಗಳು ಕಡಿಮೆಯಾದಂತೆ ಇದು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ಮುಂಬರುವ ರಾಷ್ಟಿçÃಯ ಆಸ್ತಿ ಪುನನಿರ್ಮಾಣ ಕಂಪೆನಿಯನ್ನು ‘ಕೆಟ್ಟ ಬ್ಯಾಂಕ್' ಎಂದು ಕರೆಯಬಾರದು ಎಂದು ಹಣಕಾಸು ಸಚಿವೆ ಹೇಳಿದರು. ಬ್ಯಾಂಕುಗಳು ಚುರುಕಾಗಿರಬೇಕು. ೪೦೦ ಬಿಲಿಯನ್ ಅಮೇರಿಕನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲು ಪ್ರತಿ ಘಟಕದ ಅಗತ್ಯವನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ

ಬಂಡಿಪೋರಾ, ಸೆ. ೨೬: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆAದು ತಿಳಿದುಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಶ್ಮೀರ ಪೊಲೀಸರು, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಗಾಯಗೊಂಡಿರುವ ಮೂವರು ಸೈನಿಕರು ೧೨ ಜಾಟ್ ರೆಜಿಮೆಂಟ್‌ಗೆ ಸೇರಿದವರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ಕುರಿತು ಮಾಹಿತಿ ನೀಡಿರುವ ಕಾಶ್ಮೀರ ಐಜಿಪಿ ವಿಜಯ್‌ಕುಮಾರ್ ಅವರು, ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಇಬ್ಬರ ಪೈಕಿ ಓರ್ವ ಉಗ್ರ ಸ್ಥಳೀಯವಾಗಿ ತರಬೇತಿ ಪಡೆದವನಾಗಿದ್ದು, ಮತ್ತೊರ್ವ ಪಾಕಿಸ್ತಾನದಲ್ಲಿ ತರಬೇತಿ ಪಡೆದವನಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಉಗ್ರ ಬಿಜೆಪಿ ನಾಯಕ ವಾಸೀಮ್ ಬರಿ ಹತ್ಯೆ ಪ್ರಕರಣದಲ್ಲಿ ಭಾಗಿಯಾದವನಾಗಿದ್ದಾನೆಂದು ಹೇಳಿದ್ದಾರೆ.

ಅತ್ಯಾಚಾರ ಪ್ರಕರಣ:ಐ.ಎ.ಎಫ್. ಲೆಫ್ಟಿನೆಂಟ್ ಬಂಧನ

ಕೊಯಮತ್ತೂರ್, ಸೆ. ೨೬: ಭಾರತೀಯ ವಾಯುಪಡೆ ಮಹಿಳಾ ಅಧಿಕಾರಿ ಮೇಲಿನ ಅತ್ಯಾಚಾರ ಮಾಡಿದ ಆರೋಪದ ಮೇಲೆ ಐಎಎಫ್‌ನ ಲೆಫ್ಟಿನೆಂಟ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರ್ ಏರ್‌ಫೋರ್ಸ್ ಆಡಳಿತಾತ್ಮಕ ಕಾಲೇಜಿನಲ್ಲಿ ಎರಡು ವಾರಗಳ ಹಿಂದೆ ಪ್ರಕರಣ ನಡೆದಿತ್ತು. ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರೂ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆ ಸಂತ್ರಸ್ತೆ ಕೊಯಮತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ ಎಂದು ಕೊಯಮತ್ತೂರ್ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ದೂರಿನಲ್ಲಿ ಸೆಪ್ಟೆಂಬರ್ ೧೦ ರಂದು ಕ್ರೀಡೆಯೊಂದರಲ್ಲಿ ಭಾಗವಹಿಸಿದ್ದಾಗ ಬಿದ್ದು ಗಾಯವಾಗಿತ್ತು. ಔಷಧ ತೆಗೆದುಕೊಂಡು ಮಲಗಿದ್ದೆ. ಆದರೆ ಮಧ್ಯರಾತ್ರಿ ನನಗೆ ಎಚ್ಚರವಾದಾಗ ನನ್ನ ಮೇಲೆ ಅತ್ಯಾಚಾರ ಆಗಿದ್ದು ಗೊತ್ತಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಪ್ರಕರಣದ ಆರೋಪಿಯಾಗಿರುವ ಅಮರಿಂದರ್ ಅವರನ್ನು ನ್ಯಾಯಾಧೀಶರ ಮನೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ : ಇಬ್ಬರು ದುರ್ಮರಣ

ಆನೇಕಲ್, ಸೆ. ೨೬: ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿಯ ಹೊಸೂರು ಬಳಿ ಸಂಭವಿಸಿದೆ. ಹೊಸೂರು ಸಮೀಪದ ಸೂಳಗಿರಿ ಹೆಚ್.ಪಿ. ಪೆಟ್ರೋಲ್ ಬಂಕ್ ಎದುರು ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ಸುಮಂತ್ ಮತ್ತು ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ ಮೃತ ದುರ್ದೈವಿಗಳು. ಇಂಡಿಕಾ ಕಾರಿಗೆ ರಾಂಗ್ ರೂಟ್‌ನಲ್ಲಿ ಬಂದ ಸ್ಕೋಡಾ ಕಾರು ಡಿಕ್ಕಿ ಹೊಡೆದಿದೆ. ಮೃತದೇಹಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಸುಮಂತ್ ಎಂಬ ಕಾರು ಚಾಲಕ ೩೦ ಅಡಿ ದೂರ ಹೋಗಿ ಬಿದ್ದಿದ್ದಾರೆ. ಅಪಘಾತ ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೌಡಿಶೀಟರ್‌ಗಳ ಬಂಧನ

ಬೆAಗಳೂರು, ಸೆ. ೨೬: ದಾರಿಹೋಕರ ಮೇಲೆ ಮಾರಕಾಸ್ತçಗಳಿಂದ ಹಲ್ಲೆ ಮಾಡಿ ದರೋಡೆಗೆ ಸಂಚು ರೂಪಿಸಿದ್ದ ರೌಡಿಶೀಟರ್‌ಗಳು ಸೇರಿ ಅವರ ಸಹಚರರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಾ. ೨೫ ರಂದು ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ಸರ್ಕಾರಿ ಶಾಲೆ ಕೌಂಪೌAಡ್ ಬಳಿ ರಸ್ತೆಯಲ್ಲಿ ಪುಟ್ಟೇನಹಳ್ಳಿ ಹಾಗೂ ಕೆ.ಪಿ. ಅಗ್ರಹಾರ ರೌಡಿಶೀಟರ್‌ಗಳು ತಮ್ಮ ಸಹಚರರೊಂದಿಗೆ ಸೇರಿ ದಾರಿಹೋಕರನ್ನು ಅಡ್ಡಗಟ್ಟಿ ಮಾರಕಾಸ್ತçಗಳಿಂದ ಹಲ್ಲೆ ನಡೆಸಿ, ದರೋಡೆ ಮಾಡಲು ಸಂಚು ರೂಪಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ನಾಲ್ವರು ಆರೋಪಿಗಳನ್ನು ಬಂಧಿಸಿ, ಒಂದು ರಿವಾಲ್ವರ್, ೬ ಜೀವಂತ ಗುಂಡುಗಳು ಹಾಗೂ ಮಾರಕಾಸ್ತçಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕೈದಿಗಳಿಗೆ ಕೊರೊನಾ ಪಾಸಿಟಿವ್

ಮುಂಬೈ, ಸೆ. ೨೬: ಇಲ್ಲಿನ ಬೈಕುಲಾ ಮಹಿಳಾ ಜೈಲಿನಲ್ಲಿರುವ ೩೯ ಕೈದಿಗಳಿಗೆ ಕೋವಿಡ್-೧೯ ಸೋಂಕು ದೃಢಪಟ್ಟಿದೆ. ಬೃಹತ್ ಮುಂಬೈ ಮಹಾನಗರ ಪಾಲಿಕೆಯಿಂದ ಈ ಜೈಲಿನ ಕೈದಿಗಳು, ಸಿಬ್ಬಂದಿ ಸೇರಿದಂತೆ ಒಟ್ಟು ೧೨೦ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ೩೯ ಕೈದಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ೧೦ ದಿನಗಳ ಅವಧಿಯಲ್ಲಿ ಆರು ಮಕ್ಕಳು ಸೇರಿದಂತೆ ೩೯ ಮಹಿಳಾ ಕೈದಿಗಳಿಗೆ ಕೋವಿಡ್-೧೯ ಸಾಂಕ್ರಾಮಿಕ ತಗುಲಿರುವುದು ಪತ್ತೆಯಾಗಿದೆ. ಈ ಸೋಂಕಿತರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದ್ದು, ಜೈಲಿನಿಂದ ಬಿಎಂಸಿ ಶಾಲೆಯ ಐಸೋಲೇಷನ್ ಕ್ಯಾಂಪ್‌ಗೆ ಸ್ಥಳಾಂತರಿಸಲಾಗಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.