ಕೂಡಿಗೆ, ಸೆ. ೨೬: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗೀತಾ ಗಾಯನ ಕಾರ್ಯಕ್ರಮವು ಹೆಬ್ಬಾಲೆ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.

ಹೆಬ್ಬಾಲೆ ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ಭರಾಟೆಯಲ್ಲಿ ನಶಿಸಿ ಹೋಗುತ್ತಿರುವ ಗ್ರಾಮೀಣ ಸೊಗಡನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಮಣಜೂರು ಮಂಜುನಾಥ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಧರ್ಮಪ್ಪ ಸೇರಿದಂತೆ ಶಾಲಾ ಶಿಕ್ಷಕರ ವೃಂದ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.