ಸುಂಟಿಕೊಪ್ಪ, ಸೆ. ೨೬: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಆಟೋ ರಿಕ್ಷಾ ಮಗುಚಿಕೊಂಡ ಘಟನೆ ಸುಂಟಿಕೊಪ್ಪ ಮುಖ್ಯ ರಸ್ತೆಯಲ್ಲಿ ನಡೆದಿದೆ. ಪರಿಣಾಮ ಆಟೋ ಮಗುಚಿಕೊಂಡು, ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಆಟೋದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.