ಮಡಿಕೇರಿ, ಸೆ. ೨೮: ಸೋಮವಾರಪೇಟೆ ತಾಲೂಕಿಗೆ ಸಂಬAಧಿಸಿದ ಹೋಬಳಿಗಳಲ್ಲಿ ಅಕ್ಟೋಬರ್ ಮಾಹೆಯಲ್ಲಿ ಪಿಂಚಣಿ ಹಾಗೂ ಕಂದಾಯ ಅದಾಲತ್ ನಡೆಯಲಿದೆ.

ಅಕ್ಟೋಬರ್ ೪ ರಂದು ಬೆಳಿಗ್ಗೆ ೧೧ ಗಂಟೆಗೆ ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ ಮತ್ತು ಮಧ್ಯಾಹ್ನ ೩ ಗಂಟೆಗೆ ಕುಶಾಲನಗರ ತಾಲೂಕು ಕಚೇರಿಯಲ್ಲಿ ಪಿಂಚಣಿ ಹಾಗೂ ಕಂದಾಯ ಅದಾಲತ್ ನಡೆಯಲಿದೆ ಎಂದು ಉಪ ವಿಭಾಗಾಧಿಕಾರಿ ತಿಳಿಸಿದ್ದಾರೆ.