ಮಡಿಕೇರಿ, ಸೆ. ೨೭ : ಮಡಿಕೇರಿ ದಸರಾ ಆಚರಣೆಯ ಪೂರ್ವಸಿದ್ಧತೆ ಸಂಬAಧ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ತಾ. ೨೮ ರಂದು (ಇಂದು) ಸಂಜೆ ೫ ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಪೇಟೆ ಶ್ರೀರಾಮಮಂದಿರ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುವುದು ಎಂದು ನಗರ ದಸರಾ ಸಮಿತಿ ಗೌರವ ಕಾರ್ಯದರ್ಶಿ ಹಾಗೂ ಪೌರಾಯುಕ್ತ ರಾಮದಾಸ್ ತಿಳಿಸಿದ್ದಾರೆ.