ನಾಪೋಕ್ಲು, ಸೆ. ೨೭: ಪೌಷ್ಟಿಕಾಂಶವುಳ್ಳ ಆಹಾರ ಸೇವನೆಯಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲೆ ಸೌಭಾಗ್ಯ ಹೇಳಿದರು. ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟಿçÃಯ ಪೋಷಣ್ ಅಭಿಯಾನ, ಮತದಾರರ ಸಾಕ್ಷರತಾ ಕ್ಲಬ್, ಎನ್‌ಎಸ್‌ಎಸ್ ಘಟಕ ಹಾಗೂ ಇಕೋ ಕ್ಲಬ್ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆಯಲ್ಲಿ ಮತದಾರರ ಕ್ಲಬ್ ಅಗತ್ಯತೆ ಕುರಿತು ಶಿಕ್ಷಕಿ ಉಷಾರಾಣಿ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಹೆಚ್ಚಿನ ಮಹತ್ವವಿದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದರು.
ಅAಗನವಾಡಿ ಕಾರ್ಯಕರ್ತೆ ಆಶಾಲತಾ ಮಾತನಾಡಿ ಪೋಷಣ್ ಅಭಿಯಾನದ ಉದ್ದೇಶವು ಕಾರ್ಯರೂಪಕ್ಕೆ ಬರುವಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು. ಶಾಲೆಯ ಅಧ್ಯಕ್ಷ ತೊತ್ತಿಯನ ಓಂಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿಗಳು ಪೌಷ್ಟಿಕಾಂಶಯುಕ್ತ ಆಹಾರಗಳನ್ನು ತಯಾರಿಸಿದರು. ವಿವಿಧ ತರಕಾರಿಗಳ ಪ್ರದರ್ಶನ ಹಾಗೂ ಮಕ್ಕಳ ಸಂತೆ ವೀಕ್ಷಕರ ಮೆಚ್ಚುಗೆ ಗಳಿಸಿತು. ಶಿಕ್ಷಕರು, ಪೋಷಕರು, ಅಂಗನವಾಡಿ ಆಶಾಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಉಪಪ್ರಾಂಶುಪಾಲೆ ಸೌಭಾಗ್ಯ ಸ್ವಾಗತಿಸಿದರು. ಶಿಕ್ಷಕಿ ಕಸ್ತೂರಿ ಕಾರ್ಯಕ್ರಮ ನಿರೂಪಿಸಿದರು. ಗಂಗಮ್ಮ ವಂದಿಸಿದರು. ಬಳಿಕ ಶಾಲಾ ಆವರಣದಲ್ಲಿ ಗಿಡನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.