ಪೊನ್ನಂಪೇಟೆ. ಸೆ. ೨೮: ರಾಷ್ಟಿçÃಯ ಸೇವಾ ಯೋಜನೆ ದಿನಾಚರಣೆಯ ಪ್ರಯುಕ್ತ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕ ಹಾಗೂ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ, ಪೊನ್ನಂಪೇಟೆ ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಮುಖ್ಯರಸ್ತೆಯಲ್ಲಿ ಒಂದು ಕಿಲೋಮೀಟರ್ ದೂರದವರೆಗೆ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳನ್ನು ಹೆಕ್ಕುವ ಮೂಲಕ ಸ್ವಚ್ಛಗೊಳಿಸಲಾಯಿತು. ಸಾರ್ವಜನಿಕರಲ್ಲಿ ರಸ್ತೆಗೆ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಯಿತು. ಅರಣ್ಯ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಅಧಿಕಾರಿಗಳಾದ ಮುಕ್ಕಾಟಿರ ಕೆ. ಸುಬ್ರಮಣಿ, ಡಾ. ಈಶ್ವರ್, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷೆ ಬೊಟ್ಟಂಗಡ ದಶಮಿ, ಪಿಡಿಒ ಪುಟ್ಟರಾಜು, ಗ್ರಾ.ಪಂ. ಸದಸ್ಯರಾದ ರಾಮಕೃಷ್ಣ. ವಿಜಯಕುಮಾರ್, ಹಸಿರು ದಳದ ಮಂಗಲ್ ಹಾಗೂ ಎನ್‌ಎಸ್‌ಎಸ್ ಸ್ವಯಂ ಸೇವಕರು ಹಾಜರಿದ್ದರು.