ಸೋಮವಾರಪೇಟೆ, ಸೆ. ೨೮: ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಆದೇಶದಂತೆ ಕೋವಿಡ್ ಲಸಿಕಾ ಅಭಿಯಾನದ ಮೂಲಕ ತಾ. ೨೯ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಎರಡನೇ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ರಾಜು ತಿಳಿಸಿದ್ದಾರೆ. ಕಾಲೇಜಿನ ಪ್ರಾಧ್ಯಾಪಕ ವರ್ಗ, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುವುದು ಎಂದು ಮಾಹಿತಿಯಿತ್ತಿದ್ದಾರೆ.