ಕುಶಾಲನಗರ, ಸೆ. ೨೯: ಕುಶಾಲನಗರದಲ್ಲಿ ಕೊಡವ ಸಮಾಜ ವತಿಯಿಂದ ಕೈಲ್ ಮುಹೂರ್ತ ಸಂತೋಷ ಕೂಟ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಪಾಲ್ಗೊಂಡು ಮಾತನಾಡಿ, ಸರ್ಕಾರ ಕೊಡಗು ಸೇರಿದಂತೆ ಕೊಡವರ ಬಗ್ಗೆ ನಿರ್ಲಕ್ಷö್ಯ ತಾಳಿರುವುದು ವಿಷಾದನೀಯ. ಈ ನಿಟ್ಟಿನಲ್ಲಿ ಸಂಘಟಿತ ಹೋರಾಟದ ಅಗತ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡವ ಆಚಾರ, ವಿಚಾರ, ಪರಂಪರೆಯ ಕೊಡವಾಮೆ ಉಳಿಯಬೇಕು. ಕೊಡವರಿಗೆ ವಿಶ್ವದೆಲ್ಲೆಡೆ ವಿಶೇಷ ಗೌರವವಿದೆ ಅದನ್ನು ಉಳಿಸಿಕೊಳ್ಳುವ ಕೆಲಸ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.
ಸಂತೋಷಕೂಟದ ಅಂಗವಾಗಿ ಸಮುದಾಯ ಬಾಂಧವರಿಗೆ ಆಟೋಟ ಸ್ಪರ್ಧೆ, ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಮಕ್ಕಳಿಗೆ ಮತ್ತು ಮಹಿಳೆಯರಿಗೆ ಪುರುಷರಿಗೆ ಪ್ರತ್ಯೇಕ ಸ್ಪರ್ಧೆಗಳು ನಡೆದವು.
ಕಾರ್ಯಕ್ರಮದಲ್ಲಿ ಕುಶಾಲನಗರ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕೋವಿಡ್ ಸಂದರ್ಭ ಮೃತಪಟ್ಟವರ ಅಂತ್ಯಕ್ರಿಯೆ ನಡೆಸುತ್ತಿದ್ದ ತಂಡದ ಸದಸ್ಯರಿಗೆ ಸಮಾಜದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ನಡೆಯಿತು. ಕೊಡವ ಸಮಾಜದ ಅಧ್ಯಕ್ಷ ಮಂಡೇಪAಡ ಬೋಸ್ ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಉಪಾಧ್ಯಕ್ಷ ಉಡುವೆರ ಹ್ಯಾರಿ ಚಿಟ್ಟಿಯಪ್ಪ, ಕಾರ್ಯದರ್ಶಿ ಐಲಪಂಡ ಸಂಜು ಬೆಳ್ಯಪ್ಪ, ಮಾಜಿ ಅಧ್ಯಕ್ಷ ಚೇಂದAಡ ಜೆಮ್ಸಿ ಪೊನ್ನಪ್ಪ, ಮೇವಡ ಚಿಂಗಪ್ಪ, ಸಮಾಜದ ನಿರ್ದೇಶಕರು, ಸದಸ್ಯರು ಇದ್ದರು.